ನ.11ಕ್ಕೆ ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ: ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳನ್ನು ಕರೆತರಲು ಶಿಕ್ಷಣ ಇಲಾಖೆ ಸುತ್ತೋಲೆ
ಬೆಂಗಳೂರು, ನ. 8: ಪ್ರಧಾನಿ ಮೋದಿಯವರು (Narendra Modi) ನ.11ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಆಗಮಿಸುತ್ತಿರುವ ಪ್ರಯುಕ್ತ ಜಿಲ್ಲೆಯ ಎಲ್ಲ ಸರಕಾರಿ, ಅನುದಾನಿತ, ಅನುದಾನ ರಹಿತ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರು ತಮ್ಮ ಕಾಲೇಜು ವಿದ್ಯಾರ್ಥಿಗಳನ್ನು ಕಾರ್ಯಕ್ರಮಕ್ಕೆ ಕರೆತರಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.
ನ.2ರಂದು ನಡೆದ ಪೂರ್ವಭಾವಿ ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸಿದಂತೆ ತಮ್ಮ ಕಾಲೇಜಿನಿಂದ ನಿಗದಿಪಡಿಸಿದಷ್ಟು ವಿದ್ಯಾರ್ಥಿಗಳನ್ನು ನಿಯೋಜಿಸಿರುವ ಬಸ್ನ ನೋಡಲ್ ಅಧಿಕಾರಿಗಳು ಹಾಗೂ ಪ್ರಾಂಶುಪಾಲರು ನಿಗದಿತ ಸಮಯಕ್ಕೆ ಸರಿಯಾಗಿ ಕಾರ್ಯಕ್ರಮಕ್ಕೆ ಕ್ಷೇಮವಾಗಿ ಕರತರಲು ಹಾಗೂ ಕಾರ್ಯಕ್ರಮ ಮುಗಿದ ನಂತರ ವಾಪಸ್ ಕರೆದುಕೊಂಡು ಹೋಗಲು ಸೂಚಿಸಿದೆ. ತಪ್ಪಿದ್ದಲ್ಲಿ ಮುಂದಿನ ಆಗುಹೋಗುಗಳಿಗೆ ಸಂಬಂಧಪಟ್ಟ ಕಾಲೇಜಿನ ಪ್ರಾಂಶುಪಾಲರೇ ಜವಾಬ್ದಾರಿ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ... 'ಹಿಂದೂ ಧರ್ಮ ಅನ್ನೋದು ಇಲ್ಲ...': ಬಿಜೆಪಿ ನಾಯಕ ರಮೇಶ್ ಕತ್ತಿ ವಿಡಿಯೋ ವೈರಲ್