ಮಂಗಳೂರು: ಸಂಭ್ರಮದ ಕನ್ನಡ ರಾಜ್ಯೋತ್ಸವ
ಮಂಗಳೂರು,ನ.1: ಇಲ್ಲಿನ ನೆಹರೂ ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕನ್ನಡ ರಾಜ್ಯೋತ್ಸವದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನೀಲ್ ಕುಮಾರ್ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲು, ಶಾಸಕರಾದ ಡಿ. ವೇದವ್ಯಾಸ್ ಕಾಮತ್, ಡಾ. ಭರತ್ ಶೆಟ್ಟಿ, ಯು.ಟಿ. ಖಾದರ್, ಉಮನಾಥ್ ಕೋಟ್ಯಾನ್, ವಿಧಾನ ಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್, ಹರೀಶ್ ಕುಮಾರ್, ಮಂಗಳೂರು ಮೇಯರ್ ಜಯಾನಂದ ಅಂಚನ್, ಉಪ ಮೇಯರ್ ಪೂರ್ಣಿಮ ಹಾಗೂ ಇತರೆ ಗಣ್ಯರು ಭಾಗವಹಿಸಿದ್ದರು.