ದ.ಕ., ಉಡುಪಿ ಜಿಲ್ಲೆಗಳ ವಿವಿಧೆಡೆ ಪೊಲೀಸ್ ದಾಳಿ: PFI ಮುಖಂಡರು ವಶಕ್ಕೆ
ದ.ಕ.ಜಿಲ್ಲಾದ್ಯಂತ ಹಲವು ಮಂದಿ ಪಿಎಫ್‌ಐ ಮುಖಂಡರು ಪೊಲೀಸ್ ವಶಕ್ಕೆ
ಮಂಗಳೂರು, ಸೆ 27 : ನಗರ ಹಾಗೂ ಗ್ರಾಮಾಂತರ ಪ್ರದೇಶದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಸಂಘಟನೆಯ ಹಲವು ಮಂದಿ ನಾಯಕರನ್ನು ಪೊಲೀಸರು ಸೋಮವಾರ ತಡರಾತ್ರಿ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ.
ಉಳ್ಳಾಲ, ತಲಪಾಡಿ, ಮಂಗಳೂರು ಹಾಗೂ ದ.ಕ. ಜಿಲ್ಲಾ ಪೊಲೀಸ್ ವ್ಯಾಪ್ತಿಯ ಕೆಲವು ಪ್ರದೇಶದ ಮನೆಗಳಿಂದ ಹಲವು ಮಂದಿ ಪಿಎಫ್‌ಐ ಮುಖಂಡರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.
ಮುನ್ನೆಚ್ಚರಿಕಾ ಕ್ರಮವಾಗಿ ಹಲವು ಮಂದಿಯನ್ನು ಸೆಕ್ಷನ್ 107, 157 ಕಾಯ್ದೆಯಡಿ ವಶಕ್ಕೆ ಪಡೆದು, ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.
ಉಡುಪಿ ಜಿಲ್ಲೆಯ ವಿವಿಧೆಡೆ ಪೋಲಿಸ್ ದಾಳಿ: ನಾಲ್ವರು ಪಿಎಫ್ಐ ಮುಖಂಡರು ವಶಕ್ಕೆ
ಉಡುಪಿ ಜಿಲ್ಲೆಯಲ್ಲೂ PFI ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಹೂಡೆ, ಗಂಗೊಳ್ಳಿ ಸೇರಿದಂತೆ ಉಡುಪಿ ಜಿಲ್ಲೆಯ ಒಟ್ಟು ನಾಲ್ಕು ಕಡೆ ದಾಳಿ ನಡೆಸಿದ ಪೊಲೀಸರು ಪಿಎಫ್ಐ ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.