ಲೈಂಗಿಕ ಕಿರುಕುಳ ಪ್ರಕರಣ: ಮುರುಘಾಶ್ರೀಗೆ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ
ಚಿತ್ರದುರ್ಗ: ಅಪ್ರಾಪ್ತ ವಯಸ್ಸಿನ ಬಾಲಕಿಯರಿಗೆ ಲೈಂಗಿಕ ಕಿರುಕುಳ ಮತ್ತು ದೌರ್ಜನ್ಯವೆಸಗಿದ ಆರೋಪದಲ್ಲಿ ಪೊಕ್ಸೊ ಕಾಯ್ದೆಯಡಿ ಬಂಧನದಲ್ಲಿರುವ ಚಿತ್ರದುರ್ಗದ ಮುರುಘಾಮಠದ ಡಾ.ಶಿವಮೂರ್ತಿ ಮುರುಘಾ ಶರಣರಿಗೆ ಮತ್ತೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ.
ಮುರುಘಾ ಶ್ರೀಗೆ ಜಾಮೀನು ಕೋರಿ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಿಗೆ ಮನವಿ ಸಲ್ಲಿಸಲಾಗಿತ್ತು. ಎರಡು ಬಾರಿ ಜೈಲು ಅವಧಿಯನ್ನು ವಿಸ್ತರಣೆ ಮಾಡಿದ್ದ ನ್ಯಾಯಾಧೀಶೆ ಬಿ.ಕೆ.ಕೋಮಲ ಅವರು, ಇಂದು (ಮಂಗಳವಾರ) ಮತ್ತೆ ಅ.10ರವರೆಗೆ ನ್ಯಾಯಾಂಗ ಬಂಧನವನ್ನು ವಿಸ್ತರಿಸಿ ಆದೇಶಿಸಿದ್ದಾರೆ.
ಅಪ್ರಾಪ್ತ ವಯಸ್ಸಿನ ಬಾಲಕಿಯರಿಗೆ ಲೈಂಗಿಕ ಕಿರುಕುಳ ಮತ್ತು ದೌರ್ಜನ್ಯವೆಸಗಿದ ಆರೋಪದಲ್ಲಿ ಮೇಲೆ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣ ಸ್ವಾಮೀಜಿಯ ನ್ಯಾಯಾಂಗ ಬಂಧನ ಸೆಪ್ಟೆಂಬರ್ 14ರಿಂದ ವಿಸ್ತರಣೆಯಾಗಿತ್ತು. ನ್ಯಾಯಾಂಗ ಬಂಧನದ ಅವಧಿ ಮುಕ್ತಾಯಗೊಂಡ ಹಿನ್ನೆಲೆ ಚಿತ್ರದುರ್ಗ ಜಿಲ್ಲಾ ಕೋರ್ಟ್ಗೆ ಹಾಜರು ಪಡಿಸಲಾಗಿತ್ತು.
Next Story