ಬೆಳಗಾವಿ: ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರು ಯುವಕರ ಹತ್ಯೆ
ಬೆಳಗಾವಿ: ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರು ಯುವಕರನ್ನು ಹತ್ಯೆ ಮಾಡಿರುವ ಘಟನೆ ತಾಲೂಕಿನ ಸುಳೇಭಾವಿ ಗ್ರಾಮದಲ್ಲಿ ಇಂದು (ಗುರುವಾರ) ರಾತ್ರಿ ನಡೆದಿದೆ.
ಸುಳೇಭಾವಿ ಗ್ರಾಮದ ಮಹೇಶ್ ಮುರಾರಿ (26) ಹಾಗೂ ಪ್ರಕಾಶ್ ನಿಂಗಪ್ಪ ಹುಂಕ್ರಿಪಾಟೀಲ್ (24) ಹತ್ಯೆಯಾದ ಯುವಕರು ಎಂದು ತಿಳಿದು ಬಂದಿದೆ.
ಇಂದು ರಾತ್ರಿ ಸುಳೇಭಾವಿ ಗ್ರಾಮದ ಶಿವಾಜಿ ಮಹಾರಾಜರ ಪ್ರತಿಮೆ ಬಳಿ ನಿಂತಿದ್ದ ವೇಳೆ ಅಲ್ಲಿಗೆ ಬಂದ ಗುಂಪೊಂದು ಇಬ್ಬರು ಯುವಕರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ, ಹತ್ಯೆ ಮಾಡಿದೆ ಎಂದು ಹೇಳಲಾಗಿದೆ.
ಕೊಲೆಗೆ ನಿಖರ ಕಾರಣ ಇನ್ನೂ ತಿಳಿದಿಲ್ಲ. ಈ ಸಂಬಂಧ ಮಾರಿಹಾಳ ಠಾಣೆಯಲ್ಲಿ ಪ್ರಕರಣ ದಾಖಲಾಗುದ್ದು, ನಗರ ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ, ಡಿಸಿಪಿ ರವೀಂದ್ರ ಗಡಾಡಿ ಸ್ಥಳಕ್ಕೆ ಭೇಟಿ ನೀಡಿ ಪರಿಶಲನೆ ನಡೆಸಿದ್ದಾರೆ.
Next Story