"ವಂದೇ ಭಾರತ್ ಎಕ್ಸ್‌ಪ್ರೆಸ್", ''ಭಾರತ್ ಗೌರವ್ ಕಾಶಿ ದರ್ಶನ'' ರೈಲಿಗೂ ಪ್ರಧಾನಿ ಮೋದಿ ಚಾಲನೆ
ಬೆಂಗಳೂರು: ಬೆಂಗಳೂರಿನ ಕೆಎಸ್‌ಆರ್ ರೈಲು ನಿಲ್ದಾಣದಲ್ಲಿ ದಕ್ಷಿಣ ಭಾರತದ ಮೊದಲ "ವಂದೇ ಭಾರತ್ ಎಕ್ಸ್‌ಪ್ರೆಸ್" ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ಕಾಶಿ ವಿಶ್ವನಾಥನ ದರ್ಶನಕ್ಕೆ ಹೋಗುವವರಿಗೆ ಅನುಕೂಲವಾಗುವ ಭಾರತ್ ಗೌರವ್ ಕಾಶಿ ದರ್ಶನ ರೈಲಿಗೂ ಇದೇ ರೈಲು ನಿಲ್ದಾಣದಲ್ಲಿ ಚಾಲನೆ ನೀಡಿದರು. ಮೈಸೂರು-ಚೆನ್ನೈ-ಬೆಂಗಳೂರು ಮಾರ್ಗವಾಗಿ ಹಾಗೂ ಚೆನ್ನೈ-ಬೆಂಗಳೂರು-ಮೈಸೂರು ಮಾರ್ಗವಾಗಿ ಈ ರೈಲು ಸಾಗಲಿದೆ.
ಈ ಸಂದರ್ಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಇತರ ಗಣ್ಯರು ಉಪಸ್ಥಿತರಿದ್ದರು.
Next Story