ಗುಜರಾತ್ ಚುನಾವಣೆ ಬಳಿಕ ಸಚಿವ ಸಂಪುಟ ವಿಸ್ತರಣೆ: ಸಿಎಂ ಬೊಮ್ಮಾಯಿ
ಶಿವಮೊಗ್ಗ : 'ಗುಜರಾತ್ ಚುನಾವಣೆಯ ನಂತರ ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಚರ್ಚೆಯಾಗಲಿದೆ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸಂಪುಟ ವಿಸ್ತರಣೆ ಕುರಿತು ಶುಕ್ರವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, 'ಗುಜರಾತ್ ಚುನಾವಣೆ ನಂತರ ಕೇಂದ್ರದಲ್ಲಿ ನಾಯಕರನ್ನ ಭೇಟಿ ಮಾಡುತ್ತೇನೆ ಹಾಗೂ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ಚರ್ಚಿಸಿ ಮಾಹಿತಿ ನೀಡುತ್ತೇನೆ' ಎಂದು ತಿಳಿಸಿದರು.
ಮಹಾರಾಷ್ಟ್ರ ಗಡಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ''ಗಡಿ ವಿಚಾರದಲ್ಲಿ ನಮ್ಮ ನಿಲುವನ್ನು ಈಗಾಗಲೇ ತಿಳಿಸಿದ್ದೇವೆ. ಗಡಿ ವಿವಾದ ಪ್ರಕರಣ ಸುಪ್ರೀಂ ಕೋರ್ಟ್ ನಲ್ಲಿದೆ.ನಮಗೆ ಕಾನೂನಿನಲ್ಲಿ ಗಟ್ಟಿಯಾದ ನೆಲೆಗಟ್ಟಿದೆ. ಈ ಬಗ್ಗೆ ಸರ್ವಪಕ್ಷ ಸಭೆ ಕರೆದು ಚರ್ಚಿಸುತ್ತೇನೆ.ಕಾನೂನು ತಜ್ಞರ ಜೊತೆ ಚರ್ಚಿಸುತ್ತೇವೆ. ಸಮರ್ಥವಾಗಿ ವಾದ ಮಂಡಿಸುತ್ತೇವೆ'' ಎಂದರು.
Next Story