36 ಮಂದಿ ಸದಸ್ಯರ ಕೆಪಿಸಿಸಿ ಚುನಾವಣಾ ಸಮಿತಿ ರಚಿಸಿ ಎಐಸಿಸಿ ಆದೇಶ
ಬೆಂಗಳೂರು, ಡಿ. 13: ಮುಂಬರುವ 2023ರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ 36 ಮಂದಿ ಕಾಂಗ್ರೆಸ್ ಮುಖಂಡರ ನೇತೃತ್ವದಲ್ಲಿ ಚುನಾವಣೆ ಸಮಿತಿ ರಚನೆ ಮಾಡಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣು ಗೋಪಾಲ್ ಆದೇಶ ಹೊರಡಿಸಿದ್ದಾರೆ.
ಬುಧವಾರ ರಾತ್ರಿ ಈ ಸಂಬಂಧ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣು ಗೋಪಾಲ್ ಅವರು ಪಟ್ಟಿ ಪ್ರಕಟಿಸಿದ್ದು, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್ , ವಿಧಾನಸಭೆ ವಿಪಕ್ಷ ಉಪ ನಾಯಕ ಯು.ಟಿ ಖಾದರ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ್ದಿ, ದಿನೇಶ್ ಗುಂಡೂರಾವ್, ಹೆಚ್.ಕೆ.ಪಾಟೀಲ್, ಕೆ.ಹೆಚ್.ಮುನಿಯಪ್ಪ, ಎಂ.ವೀರಪ್ಪ ಮೊಯ್ಲಿ, ಡಾ.ಜಿ.ಪರಮೇಶ್ವರ್, ಆರ್.ವಿ.ದೇಶಪಾಂಡೆ, ಅಲ್ಲಂ ವೀರಭದ್ರಪ್ಪ, ರಾಮಲಿಂಗಾರೆಡ್ಡಿ, ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ, ಆರ್.ಧ್ರುವನಾರಾಯಣ, ಸಲಿಮ್ ಅಹ್ಮದ್.
ರೆಹಮಾನ್ ಖಾನ್, ಮಾರ್ಗರೇಟ್ ಆಳ್ವಾ, ಕೆ.ಜೆ.ಜಾರ್ಜ್, ಕೆ.ಗೋವಿಂದರಾಜ್, ಡಾ.ಹೆಚ್.ಸಿ.ಮಹದೇವಪ್ಪ, ಎನ್.ಚಲುವರಾಯಸ್ವಾಮಿ, ಬಸವರಾಜ ರಾಯರೆಡ್ಡಿ, ಡಿ.ಕೆ.ಸುರೇಶ್, ಎಲ್.ಹನುಮಂತಯ್ಯ, ನಾಸಿರ್ ಹುಸೇನ್, ಎಂ.ಆರ್.ಸೀತಾರಾಮ್, ಶಿವರಾಜ್ ತಂಗಡಗಿ, ವಿನಯ್ ಕುಲಕರ್ಣಿ, ವಿ.ಎಸ್.ಉಗ್ರಪ್ಪ, ಭೋಸರಾಜ್, ಶರಣಪ್ಪ ಸುನಗಾರ್, ವಿನಯ್ ಕುಮಾರ್, ಜಿ.ಪದ್ಮಾವತಿ, ಶಾಮನೂರು ಶಿವಶಂಕರಪ್ಪ ಸಮಿತಿಯಲ್ಲಿದ್ದಾರೆ.
► ಸಮಿತಿಯಲ್ಲಿರುವ ಸದಸ್ಯರ ವಿವರ ಇಲ್ಲಿದೆ....