ನಿಖಿಲ್ ಕುಮಾರಸ್ವಾಮಿ ರಾಮನಗರ JDS ಅಭ್ಯರ್ಥಿ: ಶಾಸಕಿ ಅನಿತಾ ಘೋಷಣೆ
ವಿಧಾನಸಭೆ ಚುನಾವಣೆ
ವಿಧಾನಸಭೆ ಚುನಾವಣೆ
ಬೆಂಗಳೂರು, ಡಿ.17: ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, 2023ರ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ರಾಮನಗರ ಕ್ಷೇತ್ರದ ಹಾಲಿ ಶಾಸಕಿ ಅನಿತಾ ಕುಮಾರಸ್ವಾಮಿ ಘೋಷಣೆ ಮಾಡಿದರು.
ಶನಿವಾರ ರಾಮನಗರದಲ್ಲಿ ನಡೆದ ಪಂಚರತ್ನ ಯಾತ್ರೆ ಸಂದರ್ಭದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ನಮ್ಮ ಮಾವನವರಿಗೆ, ನನ್ನ ಪತಿ ಹಾಗೂ ನನಗೆ ಕೊಟ್ಟ ಬೆಂಬಲವನ್ನು ನನ್ನ ಮಗನಿಗೂ ಕೊಡಬೇಕು ಎಂದು ಭಾವುಕವಾಗಿ ಮನವಿ ಮಾಡಿದರು.
ನಿಖಿಲ್ ಸ್ಪರ್ಧೆ ಕುರಿತು ಕೆಲವರು ಅಪಪ್ರಚಾರ ಮಾಡುತ್ತಿದ್ದರು. ಅದಕ್ಕೆಲ್ಲ ತೆರೆ ಎಳೆಯಬೇಕು ಎಂದು ಇವತ್ತು ನಿರ್ಧಾರ ಮಾಡಿದ್ದೆ ಎಂದು ಅನಿತಾ ಕುಮಾರಸ್ವಾಮಿ ಹೇಳಿದರು. ನಿಖಿಲ್ ಸ್ಪರ್ಧೆ ಕುರಿತು ಅವರು ಘೋಷಿಸುತ್ತಿದ್ದಂತೆ ಕಾರ್ಯಕರ್ತರು ಜೈಕಾರ ಹಾಕಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಉಪಸ್ಥಿತರಿದ್ದರು.
Next Story