ಹೊಸ ವರ್ಷಾಚರಣೆ: ನಂದಿ ಬೆಟ್ಟಕ್ಕೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ
ಚಿಕ್ಕಬಳ್ಳಾಪುರ, ಡಿ.31: ಹೊಸ ವರ್ಷಾಚರಣೆ ಹಿನ್ನೆಲೆ ಖ್ಯಾತ ಪ್ರವಾಸಿ ತಾಣ ನಂದಿ ಗಿರಿಧಾಮದಲ್ಲಿ ನಿರ್ಬಂಧ ಹೇರಲಾಗಿದ್ದು, ಸಾರ್ವಜನಿಕರಿಗೆ ಪ್ರವೇಶ ಬಂದ್ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್ ತಿಳಿಸಿದ್ದಾರೆ.
ಹೊಸ ವರ್ಷಾಚರಣೆಗೆ ಬೆಂಗಳೂರು ನಗರ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಪ್ರವಾಸಿಗರು ನಂದಿ ಬೆಟ್ಟಕ್ಕೆ ಬರುವ ಸಾಧ್ಯತೆ ಹೆಚ್ಚಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ) ಎನ್.ಎಂ. ನಾಗರಾಜ್ ಆದೇಶ ಹೊರಡಿಸಿದ್ದಾರೆ.
ಶನಿವಾರ (ಡಿಸೆಂಬರ್ 31) ಸಂಜೆ 6 ಗಂಟೆಯಿಂದ ಜನವರಿ 1 ಬೆಳಗ್ಗೆ 6 ಗಂಟೆವರೆಗೂ ನಿರ್ಬಂಧ ಜಾರಿಯಲ್ಲಿರಲಿದೆ.
Next Story