ಕುಮಾರಸ್ವಾಮಿ ಸಿಎಂ ಆಗದಿದ್ದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ: ಸಿ.ಎಂ.ಇಬ್ರಾಹಿಂ
ವಿಜಯಪುರ : ಕುಮಾರಸ್ವಾಮಿ ಮುಂದಿನ ಮುಖ್ಯಮಂತ್ರಿ ಆಗದಿದ್ದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ.
ಶುಕ್ರವಾರ ವಿಜಯಪುರ ನಗರದಲ್ಲಿ ಜೆಡಿಎಸ್ ಪಂಚರತ್ನ ರಥಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, 'ಕಾಂಗ್ರೆಸ್-ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಯಾರೆಂದು ಘೋಷಿಸಲಿ ಎಂದು ರಾಷ್ಟ್ರೀಯ ಪಕ್ಷಗಳಿಗೆ ಸವಾಲು ಹಾಕಿದರು.
ವಿಜಯಪುರ ಜಿಲ್ಲೆಯಲ್ಲಿ 5 ಕ್ಷೇತ್ರಗಳಲ್ಲಿ ಜೆಡಿಎಸ್ ಗೆಲ್ಲಲಿದ್ದು, ನಾಗಠಾಣಾ ಕ್ಷೇತ್ರದ ಶಾಸಕ ದೇವಾನಂದ ಚವ್ಹಾಣ ಸೇರಿದಂತೆ ಇಬ್ಬರು ಶಾಸಕರಿಗೆ ಭವಿಷ್ಯದಲ್ಲಿ ಅಧಿಕಾರಕ್ಕೆ ಬರಲಿರುವ ಜೆಡಿಎಸ್ ಸರ್ಕಾರದಲ್ಲಿ ಸಚಿವರಾಗುವ ಅವಕಾಶವಿದೆ ಎಂದರು.
'ಫೆಬ್ರವರಿ ಮುಗಿಯಲಿ ಬಿಜೆಪಿ, ಕಾಂಗ್ರೆಸ್ ಪಕ್ಷದಿಂದ ಜೆಡಿಎಸ್ ಪಕ್ಷಕ್ಕೆ ಹಲವು ನಾಯಕರು ವಲಸೆ ಬರಲಿದ್ದಾರೆ' ಎಂದು ಹೇಳಿದರು.
Next Story