ಬಿಜೆಪಿ ಮುಸ್ಲಿಮರ ಮೀಸಲಾತಿ ಕಡಿತಗೊಳಿಸಿ ಸಮಾಜ ಒಡೆಯುವ ಕೆಲಸ ಮಾಡುತ್ತಿದೆ: ಎಚ್.ಡಿ. ಕುಮಾರಸ್ವಾಮಿ
ಮೈಸೂರು: ರಾಜ್ಯ ಸರ್ಕಾರ ಆತುರಾತುರವಾಗಿ ಪಂಚಮಸಾಲಿ ಹಾಗೂ ಒಕ್ಕಲಿಗರಿಗೆ ಮೀಸಲಾತಿ ಹೆಚ್ಚಳ ಮಾಡಿ ಅಲ್ಪಸಂಖ್ಯಾತ ಮುಸ್ಲಿಮರ ಮೀಸಲಾತಿ ಕಡಿಗೊಳಿಸಿ ಸಮಾಜ ಒಡೆಯುವ ಕೆಸಲವನ್ನು ಬಿಜೆಪಿ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ಪಂಚರತ್ನ ಯಾತ್ರೆ ಸಮಾರೋಪ ಸಮಾರಂಭಕ್ಕೂ ಮುನ್ನ ರವಿವಾರ ಬೆಳಿಗ್ಗೆ ಚಾಮುಂಡಿ ಬೆಟ್ಟಕ್ಕೆ ತೆರಳಿ ಶ್ರೀಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿ ದರ್ಶನ ಪಡೆದು ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ರಾಜ್ಯ ಸರ್ಕಾರ ಆತುರಾತುರವಾಗಿ ಪಂಚಮಸಾಲಿ ಹಾಗೂ ಒಕ್ಕಲಿಗರಿಗೆ ಮೀಸಲಾತಿ ಹೆಚ್ಚಳ ಮಾಡಿರುವುದು ಸರಿಯಾದ ಕ್ರಮ ಅಲ್ಲ, ಇದರೊಂದಿಗೆ ಮುಸ್ಲಿಮರ ಮೀಸಲಾತಿಯಲ್ಲಿ ಕಡಿತ ಮಾಡುವ ಬಗ್ಗೆ ಯಾವುದೇ ಸಮಿತಿ ರಚನೆ ಆಗಿಲ್ಲ. ಆದರೂ ಮುಸ್ಲಿಮರ ಮೀಸಲಾತಿ ಕಡಿತ ಮಾಡಿ ಒಕ್ಕಲಿಗರ ಹಾಗೂ ಪಂಚಮಸಾಲಿ ಮುದಾಯಕ್ಕೆ ಮೀಸಲಾತಿ ಹೆಚ್ಚು ಮಾಡಿರುವುದರಲ್ಲಿ ಯಾವುದೇ ಸ್ಪಷ್ಟತೆ ಇಲ್ಲ ಎಂದು ಕುಮಾರಸ್ವಾಮಿ ಹೇಳಿದರು. ಇದೆಲ್ಲ ಹುಡಗಾಟಿಕೆಯ ತೀರ್ಮಾನಗಳು ಇದು ಅನುಷ್ಠಾನಕ್ಕೆ ಬರುವುದಿಲ್ಲ ಎಂದು ಅಭಿಪ್ರಾಯಪಟ್ಟರು.