ಬಾಗಲಕೋಟೆ | ಕಾರು-ಲಾರಿ ಮಧ್ಯೆ ಅಪಘಾತ: ನಾಲ್ವರು ಮೃತ್ಯು
ಬಾಗಲಕೋಟೆ, ಸೆ.26: ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಮೃತಪಟ್ಟ ಘಟನೆ ಹುನಗುಂದ ತಾಲೂಕಿನ ಧನ್ನೂರ ಟೋಲ ನಾಕಾ ಬಳಿ ಗುರುವಾರ ಬೆಳಗಿನ ಜಾವ ಸಂಭವಿಸಿದೆ.
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಿದರಕುಂದಿಯ ನಿವಾಸಿಗಳಾದ ಗುತ್ತಿಗೆದಾರ ಲಕ್ಷ್ಮಣ ವಡ್ಡರ, ಬೈಲಪ್ಪ ಬಿರಾದಾರ, ಕಾರು ಚಾಲಕ ಮುಹಮ್ಮದ್ ರಫೀಕ್ ಗುಡ್ನಾಳ, ಮುದ್ದೇಬಿಹಾಳದ ರಾಮಣ್ಣ ನಾಯಕ ಮಕ್ಕಳ ಮೃತಪಟ್ಟವರು.
ಲಾರಿ-ಕಾರು ಮುಖಾಮುಖಿ ಢಿಕ್ಕಿಯಾಗಿ ಈ ಅಪಘಾತ ಸಂಭವಿಸಿ ಎನ್ನಲಾಗಿದೆ. ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಕಾರಿನಲ್ಲಿದ್ದವರು ಹೊಸಪೇಟೆ ಬಳಿಯ ಹುಲಿಗೆಮ್ಮನ ದೇವಸ್ಥಾನದ ದರ್ಶನ ಮುಗಿಸಿಕೊಂಡು ವಾಪಸ್ ಊರಿಗೆ ಮರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ಈ ಬಗ್ಗೆ ಹುನಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story