ಬಿಜೆಪಿ ನಾಯಕ ಎಸ್.ಎಂ.ಕೃಷ್ಣರನ್ನು ಭೇಟಿಯಾದ ಡಿ.ಕೆ. ಸುರೇಶ್
ಬೆಂಗಳೂರು, ಮಾ.29: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಹಾಲಿ ಸಂಸದ ಡಿ.ಕೆ. ಸುರೇಶ್ ಅವರು ಇಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಎಸ್.ಎಂ.ಕೃಷ್ಣರನ್ನು ಭೇಟಿಯಾಗಿದ್ದಾರೆ,
ಬೆಂಗಳೂರಿನ ಸದಾಶಿವ ನಗರದಲ್ಲಿರುವ ಎಸ್.ಎಂ.ಕೃಷ್ಣ ರ ನಿವಾಸಕ್ಕೆ ಭೇಟಿ ನೀಡಿದ ಡಿ.ಕೆ.ಸುರೇಶ್ ಆಶೀರ್ವಾದ ಪಡೆದು ಮಾತುಕತೆ ನಡೆಸಿದರು.
ಭೇಟಿ ಬಗ್ಗೆ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿರುವ ಡಿ.ಕೆ.ಸುರೇಶ್, 'ಇಂದು ಕರ್ನಾಟಕದ ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ.ಕೃಷ್ಣ ದಂಪತಿಯ ಆಶೀರ್ವಾದ ಪಡೆದೆ. ಈ ವೇಳೆ ಅವರ ಸುದೀರ್ಘವಾದ ರಾಜಕೀಯ ಅನುಭವ ಮತ್ತು ಹಂಚಿಕೊಂಡ ಸಲಹೆಗಳು ಮತ್ತಷ್ಟು ನನಗೆ ಸ್ಫೂರ್ತಿಯನ್ನು ನೀಡಿವೆ.' ಎಂದಿದ್ದಾರೆ.
Next Story