ಡಿ.31ರಂದು ಕರೆ ನೀಡಿದ್ದ ಮುಷ್ಕರ ಹಿಂಪಡೆದ ಸಾರಿಗೆ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ
ಸಾಂದರ್ಭಿಕ ಚಿತ್ರ
ಬೆಂಗಳೂರು : ವಿವಿಧ ಬೇಡಿಕೆಗಳಿಗಾಗಿ ಆಗ್ರಹಿಸಿ ಜಂಟಿ ಕ್ರಿಯಾ ಸಮಿತಿ ಡಿ.31ರಿಂದ ಸಾರಿಗೆ ಮುಷ್ಕರಕ್ಕೆ ಕರೆ ನೀಡಿತ್ತು. ಆದರೆ ರವಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ನೇತೃತ್ವದಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳೊಂದಿಗೆ ನಡೆದ ಸಭೆ ಬೆನ್ನಲ್ಲೇ ಸಾರಿಗೆ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಮುಷ್ಕರ ಹಿಂಪಡೆದಿದೆ.
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ, ʼಸಾರಿಗೆ ಸಿಬ್ಬಂದಿ ಮುಷ್ಕರದ ಬಗ್ಗೆ ಮುಖ್ಯಮಂತ್ರಿ ಜೊತೆ ಚರ್ಚೆ ಮಾಡಿದ್ದೇವೆ. ಬಿಜೆಪಿ ಸರ್ಕಾರ ರೂ.5,900 ಕೋಟಿ ಸಾಲ ಬಿಟ್ಟು ಹೋಗಿದ್ದೇ ಸಮಸ್ಯೆಗೆ ಕಾರಣವಾಗಿದೆ. ಫೆಬ್ರವರಿ ಬಜೆಟ್ನಲ್ಲಿ ಇಲಾಖೆಗೆ ಅನುದಾನ ನೀಡಿ ಅಂತಾ ಬೇಡಿಕೆ ಇಟ್ಟಿದ್ದೇನೆ. ಸಂಕ್ರಾಂತಿ ಹಬ್ಬದ ಬಳಿಕ ಸಮಸ್ಯೆ ಬಗೆಹರಿಯಲಿದೆʼ ಎಂದು ತಿಳಿಸಿದರು.
Next Story