ಬೆಂಗಳೂರು | ಆನ್ಲೈನ್ ಗೇಮ್ ಗೀಳಿಗೆ ಬಿದ್ದು 20 ಲಕ್ಷ ರೂ.ಕಳೆದುಕೊಂಡ ಬ್ಯಾಂಕ್ ಉದ್ಯೋಗಿ : ವಿಡಿಯೋ ಮಾಡಿಟ್ಟು ನಾಪತ್ತೆ
ಸಾಂದರ್ಭಿಕ ಚಿತ್ರ(Meta AI)
ಬೆಂಗಳೂರು : ಆನ್ಲೈನ್ ಗೇಮ್ ಗೀಳಿಗೆ ಬಿದ್ದು 20 ಲಕ್ಷ ರೂ. ಕಳೆದುಕೊಂಡ ಬ್ಯಾಂಕ್ ಉದ್ಯೋಗಿಯೊಬ್ಬರು ಸಾಲ ತೀರಿಸಲಾಗದೇ ನಾಪತ್ತೆಯಾದ ಘಟನೆ ಇಲ್ಲಿನ ಮುದ್ದಿನಪಾಳ್ಯದಲ್ಲಿ ವರದಿಯಾಗಿದೆ.
ಭರತ್ ಎಂಬುವರು ನಾಪತ್ತೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಈತ ಆನ್ಲೈನ್ ರಮ್ಮಿ ಆಡಲು ಬ್ಯಾಂಕ್ನಿಂದ 20 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಸಾಲದ ಇಎಮ್ಐ ಕಟ್ಟಲು ಸಾಧ್ಯವಾಗದ ಕಾರಣ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.
ವಿಡಿಯೋದಲ್ಲೇನಿದೆ..?: ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿರುವ ಭರತ್, ‘ನಾನು ಜೀವನದಲ್ಲಿ ಸೋತಿದ್ದೇನೆ. ನನ್ನನ್ನು ಹುಡುಕಬೇಡಿ. ನಾನು ಮನೆಬಿಟ್ಟು ಹೋಗುತ್ತಿದ್ದೇನೆ’ ಎಂದು ವಿಡಿಯೋದಲ್ಲಿ ತಿಳಿಸಿದ್ದು, ಮೊಬೈಲ್ ಮನೆಯಲ್ಲೇ ಬಿಟ್ಟು ತೆರಳಿದ್ದಾರೆ. ಸದ್ಯ ಭರತ್ ಅವರ ಪತ್ನಿ ಚೈತ್ರಾ ಎಂಬುವವರು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.
Next Story