Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ಇನ್ವೆಸ್ಟ್ ಕರ್ನಾಟಕ’ ರೋಡ್ ಶೋ ಅಂಗವಾಗಿ...

‘ಇನ್ವೆಸ್ಟ್ ಕರ್ನಾಟಕ’ ರೋಡ್ ಶೋ ಅಂಗವಾಗಿ ಲಂಡನ್‍ನಲ್ಲಿ ಸಚಿವರ ಸರಣಿ ಸಭೆ

‘ಕ್ವಿನ್‍ಸಿಟಿ’ಯಲ್ಲಿ ಇಂಗ್ಲೆಂಡ್ ವಿವಿಗಳ ಒಲವು : ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ29 Nov 2024 5:47 PM IST
share
Photo of Program

ಲಂಡನ್ : ಯೂನಿವರ್ಸಿಟಿ ಆಫ್ ಲಿವರ್‍ಪೂಲ್, ಯುನಿವರ್ಸಿಟಿ ಆಫ್ ಈಸ್ಟ್ ಲಂಡನ್, ಯಾರ್ಕ್ ಯೂನಿವರ್ಸಿಟಿ ಮತ್ತು ವಾಲ್ವರ್‍ಹ್ಯಾಂಪ್ಟನ್ ವಿಶ್ವ ವಿದ್ಯಾನಿಲಯಗಳಂತಹ ಸಂಸ್ಥೆಗಳ ಪ್ರತಿನಿಧಿಗಳು ರಾಜ್ಯ ಸರಕಾರದ ‘ಕ್ವಿನ್ ಸಿಟಿ’ ಯೋಜನೆಯಲ್ಲಿ ಆಸಕ್ತಿ ವ್ಯಕ್ತಪಡಿಸಿದ್ದಾರೆ’ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

ಶುಕ್ರವಾರ ಮುಂದಿನ ವರ್ಷ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶ ‘ಇನ್ವೆಸ್ಟ್ ಕರ್ನಾಟಕ’ದ ಪೂರ್ವಭಾವಿ ಸಿದ್ಧತೆಗಳ ಅಂಗವಾಗಿ ಲಂಡನ್‍ನಲ್ಲಿ ಇಂಗ್ಲೆಂಡ್‍ನ ಉದ್ಯಮಿಗಳು ಮತ್ತು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳನ್ನು ಭೇಟಿ ಮಾಡಿ ಸರಣಿ ಸಭೆ ನಡೆಸಿದರು.

ಜಾಗತಿಕ ಶಿಕ್ಷಣ ಕೇಂದ್ರವಾಗಿ ಕರ್ನಾಟಕವು ಅಭಿವೃದ್ಧಿ ಹೊಂದುತ್ತಿರುವುದನ್ನು ಈ ಸಮಾಲೋಚನೆಗಳಲ್ಲಿ ಪ್ರಮುಖವಾಗಿ ಪ್ರಸ್ತಾಪಿಸಲಾಯಿತು. ಅಸ್ತಿತ್ವಕ್ಕೆ ಬರುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ಯ ವ್ಯಾಪ್ತಿಯೂ ಸೇರಿದಂತೆ ರಾಜ್ಯಾದ್ಯಂತ ಇಂಗ್ಲೆಂಡ್ ಮೂಲದ ಪ್ರತಿಷ್ಠಿತ ವಿಶ್ವ ವಿದ್ಯಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳು ತಮ್ಮ ಕ್ಯಾಂಪಸ್ ಆರಂಭಿಸಲು ವಿಫುಲ ಅವಕಾಶಗಳು ಇರುವುದನ್ನು ಅವರು ಮನದಟ್ಟು ಮಾಡಿಕೊಟ್ಟರು.

ಕರ್ನಾಟಕದ ಉದ್ದಿಮೆ ಸ್ನೇಹಿ ಪರಿಸರ, ವಿಶ್ವದರ್ಜೆಯ ಮೂಲಸೌಲಭ್ಯ ಮತ್ತು ಹೂಡಿಕೆದಾರ-ಸ್ನೇಹಿ ನೀತಿಗಳನ್ನು ಪ್ರಮುಖವಾಗಿ ಬಿಂಬಿಸಲು ವೇದಿಕೆಯಾಗಿ ಕಾರ್ಯನಿರ್ವಹಿಸಲಿರುವ ಇನ್ವೆಸ್ಟ್ ಕರ್ನಾಟಕದಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಿದರು. ಆರ್ಥಿಕ ಸಹಕಾರ ವೃದ್ಧಿಸಲು ಮತ್ತು ರಾಜ್ಯದಲ್ಲಿ ವಹಿವಾಟು ವಿಸ್ತರಿಸಲು ಜಾಗತಿಕ ಹೂಡಿಕೆದಾರರ ಸಮಾವೇಶ ನೆರವಾಗಲಿದೆ ಎಂಬುದನ್ನು ಮನದಟ್ಟು ಮಾಡಿಕೊಟ್ಟಿದ್ದಾರೆ.

ಇಂಗ್ಲೆಂಡ್‍ನ ಸಣ್ಣ ಉದ್ದಿಮೆ ಹಾಗೂ ರಫ್ತು ಸಚಿವ ಗರೆಥ್ ಥಾಮಸ್, ಬ್ರಿಟನ್ನಿನ ಡೆಪ್ಯುಟಿ ಹೈಕಮಿಷನರ್ ಹಾಗೂ ಇಂಗ್ಲೆಂಡ್ ಭಾರತ ವಹಿವಾಟು ಮಂಡಳಿಯ(ಯುಕೆಐಬಿಸಿ)ಪ್ರತಿನಿಧಿಗಳಿಗೆ ಕರ್ನಾಟಕದಲ್ಲಿ ಬಂಡವಾಳ ಹೂಡಿಕೆಗೆ ಇರುವ ವಿಫುಲ ಅವಕಾಶಗಳನ್ನು ಸಚಿವ ಪಾಟೀಲ್ ಅವರು ವಿವರಿಸಿದ್ದಾರೆ.

ಸಚಿವರ ನೇತೃತ್ವದಲ್ಲಿನ ರಾಜ್ಯದ ಉನ್ನತ ಮಟ್ಟದ ನಿಯೋಗವು ಎಂಬಿಡಿಎ, ಸಲಹಾ ಸಂಸ್ಥೆ ಸ್ಕ್ರಮ್ ಕನೆಕ್ಟ್ ಹಾಗೂ ರಸೆಲ್ ಗ್ರೂಪ್ ಆಫ್ ಯುಕೆ ಯುನಿವರ್ಸಿಟೀಸ್‍ನ ಪ್ರತಿನಿಧಿಗಳು ಸೇರಿದಂತೆ ಬ್ರಿಟನ್ನಿನ ಪ್ರಮುಖ ಕೈಗಾರಿಕೋದ್ಯಮಿಗಳ ಜೊತೆ ಪ್ರತ್ಯೇಕವಾಗಿ ದುಂಡು ಮೇಜಿನ ಸಭೆಗಳನ್ನು ನಡೆಸಿತು. ಉದ್ಯಮ ಪ್ರಮುಖ ಜೊತೆಗಿನ ಸಭೆ-ಸಮಾಲೋಚನೆಗಳಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್, ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ ಭಾಗಿಯಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X