Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬಿಬಿಎಂಪಿ ವ್ಯಾಪ್ತಿಯಲ್ಲಿ ಜನರ ಸಮಸ್ಯೆ...

ಬಿಬಿಎಂಪಿ ವ್ಯಾಪ್ತಿಯಲ್ಲಿ ಜನರ ಸಮಸ್ಯೆ ಆಲಿಸಲು ಜ.3ರಿಂದ ವಿಶೇಷ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ1 Jan 2024 9:07 PM IST
share
ಬಿಬಿಎಂಪಿ ವ್ಯಾಪ್ತಿಯಲ್ಲಿ ಜನರ ಸಮಸ್ಯೆ ಆಲಿಸಲು ಜ.3ರಿಂದ ವಿಶೇಷ ಕಾರ್ಯಕ್ರಮ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ನಾಗರಿಕರ ಅಹವಾಲು, ಕುಂದು-ಕೊರತೆಗಳನ್ನು ಆಲಿಸುವ ಸಲುವಾಗಿ ಉಪಮಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಜ.3ರಂದು ‘ಬಾಗಿಲಿಗೆ ಬಂತು ಸರಕಾರ, ಸೇವೆಗೆ ಇರಲಿ ಸಹಕಾರ’ ಎಂಬ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಜನರು ಸರಕಾರಿ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಲು ಅವರ ಮನೆ ಬಾಗಿಲಲ್ಲೇ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದ್ದು, ಪಾಲಿಕೆ ವ್ಯಾಪ್ತಿಯ 8 ವಲಯಗಳಲ್ಲಿ 28 ಕ್ಷೇತ್ರಗಳು ಬರಲಿದ್ದು, ವಲಯವಾರು 2 ಅಥವಾ 3 ವಿಧಾನಸಭಾ ಕ್ಷೇತ್ರಗಳನ್ನು ಒಗ್ಗೂಡಿಸಿ ಸದರಿ ಕಾರ್ಯಕ್ರಮವನ್ನು ನಡೆಸಲಾಗುವುದು ಎಂದು ತಿಳಿಸಲಾಗಿದೆ.

ಅದರಂತೆ, ಮೊದಲನೆ ಹಂತದಲ್ಲಿ ಮಹದೇವಪುರ, ಯಲಹಂಕ ಹಾಗೂ ಪೂರ್ವ ವಲಯ ವ್ಯಾಪ್ತಿಯ ಕ್ಷೇತ್ರಗಳಲ್ಲಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಎರಡನೆ ಹಂತದಲ್ಲಿ ಉಳಿದ ಕ್ಷೇತ್ರಗಳಲ್ಲಿ ಕಾರ್ಯಕ್ರಮವನ್ನು ನಡೆಸಲಾಗುವುದು. ನಾಗರಿಕರು ಕಾರ್ಯಕ್ರಮದ ಸ್ಥಳಕ್ಕೆ ಆಗಮಿಸಿ ತಮ್ಮ ಅಹವಾಲು, ಸಮಸ್ಯೆಗಳನ್ನು ನಿವೇದಿಸಿಕೊಳ್ಳಬಹುದಾಗಿದೆ. ನಾಗರಿಕರಿಗೆ ಆಸನಗಳ ವ್ಯವಸ್ಥೆ, ಕುಡಿಯುವ ನೀರು, ತಾತ್ಕಾಲಿಕ ಶೌಚಾಲಯಗಳ ವ್ಯವಸ್ಥೆ ಹಾಗೂ ಮಧ್ಯಾಹ್ನ ಲಘು ಉಪಹಾರದ ವ್ಯವಸ್ಥೆ ಮಾಡಲಾಗಿರುತ್ತದೆ.

ಸಿಬ್ಬಂದಿಗೆ ತರಬೇತಿ: ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಬಂದಂತಹ ದೂರುಗಳನ್ನು ಸಮಗ್ರ ಸಾರ್ವಜನಿಕ ಕುಂದುಕೊರತೆಗಳ ಪರಿಹಾರ ವ್ಯವಸ್ಥೆ ಸಾಫ್ಟ್‌ ವೇರ್ ನಲ್ಲಿ ದಾಖಲಿಸಲು ಪಾಲಿಕೆ ಸಿಬ್ಬಂದಿಗಳಿಗೆ ಈಗಾಗಲೇ ತರಬೇತಿ ನೀಡಲಾಗಿದೆ. ನಾಗರಿಕರ ಸಂಪೂರ್ಣ ವಿವರ ಹಾಗೂ ಬಂದಂತಹ ದೂರುಗಳು ಯಾವ ಇಲಾಖೆಗೆ ಸಂಬಂಧಿಸಿದ್ದು ಎಂಬುದನ್ನು ಸಾಫ್ಟ್‌ ವೇರ್ ನಲ್ಲಿ ದಾಖಲಿಸಲು ವೈ-ಫೈ, ಗಣಕಯಂತ್ರ, ಪ್ರಿಂಟರ್ ಹಾಗೂ ಸ್ಕ್ಯಾನರ್ ಗಳ ವ್ಯವಸೆಯೊಂದಿಗೆ 15 ಕೌಂಟರ್ ಗಳನ್ನು ಸ್ಥಾಪಿಸಲಾಗಿರುತ್ತದೆ.

ಹೆಲ್ಪ್ ಡೆಸ್ಕ್: ಕಾರ್ಯಕ್ರಮದ ಸ್ಥಳದಲ್ಲಿ ನಾಗರಿಕರಿಗೆ ಅನುಕೂಲವಾಗಲು ಸಹಾಯ ಕೇಂದ್ರ (ಹೆಲ್ಪ್ ಡೆಸ್ಕ್)ವನ್ನು ಸ್ಥಾಪಿಸಲಾಗಿರುತ್ತದೆ. ಅಲ್ಲದೆ, ನಾಗರಿಕರಿಗೆ ಮಾಹಿತಿ ಒದಗಿಸುವ ನಾಮಫಲಕಗಳನ್ನು ಅಳವಡಿಸಲಾಗಿರುತ್ತದೆ.

ಟೋಕನ್ ವ್ಯವಸ್ಥೆ: ‘ಬಾಗಿಲಿಗೆ ಬಂತು ಸರಕಾರ, ಸೇವೆಗೆ ಇರಲಿ ಸಹಕಾರ’ ಕಾರ್ಯಕ್ರಮದಲ್ಲಿ ನಾಗರಿಕರು ಅಹವಾಲುಗಳನ್ನು ನೀಡಲು ಅನುವಾಗಲೆಂದು ಟೋಕನ್‍ಗಳನ್ನು ಪಡೆಯಲು 10 ಕೌಂಟರ್ ವ್ಯವಸ್ಥೆ ಮಾಡಲಾಗುತ್ತದೆ. ವಿಕಲಚೇತನರು ಹಾಗೂ ಹಿರಿಯ ನಾಗರಿಕರಿಗೆ ಪ್ರತ್ಯೇಕ ಕೌಂಟರ್ ವ್ಯವಸ್ಥೆ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ನೇರವಾಗಿ ಭೇಟಿಯಾಗಲು ವ್ಯವಸ್ಥೆ ಕಲ್ಪಿಸಲಾಗುತ್ತದೆ. ಆಯಾ ಕ್ಷೇತ್ರದ ಶಾಸಕರನ್ನೂ ಆಹ್ವಾನಿಸಲಾಗಿದೆ.

ಒಂದೇ ಸೂರಿನಡಿ ವಿವಿಧ ಇಲಾಖೆಗಳು: ನಾಗರಿಕರ ಸಮಸ್ಯೆಗಳನ್ನು ಒಂದೇ ಸೂರಿನಡಿ ಬಗೆಹರಿಸುವ ನಿಟ್ಟಿನಲ್ಲಿ ಎಲ್ಲ ಪ್ರಮುಖ ಇಲಾಖೆಗಳಾದ ಬಿಬಿಎಂಪಿ, ಬಿಡಿಎ, ಬೆಸ್ಕಾಂ, ಜಲಮಂಡಳಿ, ಬಿಎಂಆರ್ ಸಿಎಲ್ (ಮೆಟ್ರೋ), ಕೊಳಗೇರಿ ಅಭಿವೃದ್ಧಿ ಮಂಡಳಿ, ಪೊಲೀಸ್ ಇಲಾಖೆ, ಬಿಎಂಟಿಸಿ, ಕಂದಾಯ ಇಲಾಖೆ ಸೇರಿದಂತೆ ಇನ್ನಿತರೆ ಇಲಾಖೆಗಳ ಅಧಿಕಾರಿಗಳು ಸ್ಥಳದಲ್ಲೇ ಉಪಸ್ಥಿತರಿರಲಿದ್ದಾರೆ.

ಎಲ್ಲೆಲ್ಲಿ ಕಾರ್ಯಕ್ರಮ:

ಜ.3ಕ್ಕೆ ಐಟಿಐ ಕ್ರೀಡಾಂಗಣ, ದೂರವಾಣಿ ನಗರ, ಕೆ.ಆರ್.ಪುರ ಕ್ಷೇತ್ರ, ಕೆ.ಆರ್.ಪುರ, ಮಹದೇವಪುರ. ಆ.5ಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ಭವನ, ಯಲಹಂಕ ನ್ಯೂ ಟೌನ್. ಯಲಹಂಕ ಕ್ಷೇತ್ರ, ಬ್ಯಾಟರಾಯನಪುರ, ದಾಸರಹಳ್ಳಿ. ಜ.6ಕ್ಕೆ ಆರ್ ಬಿಎಎನ್‍ಎಮ್‍ಎಸ್ ಹೈಸ್ಕೂಲ್ ಮೈದಾನ, ಸೆಂಟ್ ಜಾನ್ಸ್ ರಸ್ತೆ, ಶಿವನ್ ಚೆಟ್ಟಿ ಗಾರ್ಡನ್. ಹೆಬ್ಬಾಳ ಕ್ಷೇತ್ರ. ಶಿವಾಜಿನಗರ, ಪುಲಕೇಶಿನಗರ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X