ದೊಡ್ಡಬಳ್ಳಾಪುರ | ಕಾರು-ಟ್ಯಾಂಕರ್ ನಡುವೆ ಅಪಘಾತ; ಇಬ್ಬರು ಮೃತ್ಯು

ಬೆಂಗಳೂರು : ದೊಡ್ಡಬಳ್ಳಾಪುರ ತಾಲೂಕಿನ ಮಾಕಳಿ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಕಾರು ಮತ್ತು ತೈಲ ಸಾಗಾಟದ ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತಿಬ್ಬರಿಗೆ ಗಂಭೀರ ಗಾಯಗೊಂಡಿದ್ದಾರೆ.
ಮೃತರನ್ನು ಕೊಣನಕುಂಟೆಯ ವಸಂತ್, ಆವಲಹಳ್ಳಿಯ ಚೇತನ್ ಎಂದು ಗುರುತಿಸಲಾಗಿದ್ದು, ಕಿರಣ್ ಸೇರಿದಂತೆ ಮತ್ತೊಬ್ಬ ಯುವಕ ಗಾಯಗೊಂಡಿದ್ದಾರೆ.
ಸೋಮವಾರ ಸಂಜೆ ದೊಡ್ಡಬಳ್ಳಾಪುರದ ಬಳಿ ಭೀಕರ ರಸ್ತೆ ಅಪಘಾತ ಗೌರಿಬಿದನೂರು ಕಡೆಯಿಂದ ಕಾರಿನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದರು. ದೊಡ್ಡಬಳ್ಳಾಪುರ ಕಡೆಯಿಂದ ಬಂದ ಲಾರಿ ಕಾರಿಗೆ ಢಿಕ್ಕಿ ಹೊಡೆದಿದ್ದು, ಇದರ ರಭಸಕ್ಕೆ ಕಾರು ಚಾಲಕ ಹಾಗೂ ಹಿಂಬದಿ ಕುಳಿತಿದ್ದ ಯುವಕ ಸಾವನ್ನಪ್ಪಿದ್ದಾರೆ.
ಈ ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story