Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಗೂಂಡಾ ಕಾಯ್ದೆ ಮಾದರಿಯಲ್ಲಿ ಡ್ರಗ್ಸ್...

ಗೂಂಡಾ ಕಾಯ್ದೆ ಮಾದರಿಯಲ್ಲಿ ಡ್ರಗ್ಸ್ ಪೆಡ್ಲರ್ ಗಳ ಮೇಲೆ ಕ್ರಮ : ಪೊಲೀಸ್ ಆಯುಕ್ತ ಬಿ.ದಯಾನಂದ್

ವಾರ್ತಾಭಾರತಿವಾರ್ತಾಭಾರತಿ27 Jan 2024 7:38 PM IST
share
ಗೂಂಡಾ ಕಾಯ್ದೆ ಮಾದರಿಯಲ್ಲಿ ಡ್ರಗ್ಸ್ ಪೆಡ್ಲರ್ ಗಳ ಮೇಲೆ ಕ್ರಮ : ಪೊಲೀಸ್ ಆಯುಕ್ತ ಬಿ.ದಯಾನಂದ್

ಬೆಂಗಳೂರು: ಗೂಂಡಾ ಕಾಯ್ದೆ ಮಾದರಿಯಲ್ಲೇ ಡ್ರಗ್ಸ್ ಪೆಡ್ಲರ್ ಗಳ ಮೇಲೆಯೂ ಪ್ರಿವೇಂಟಿವ್ ಡೆಟೆನ್ಷನ್ ಆಕ್ಟ್ ಹಾಕುವ ಅವಕಾಶ ಕಾನೂನಿನಲ್ಲಿದ್ದು, ಅದನ್ನು ಮುಂದಿನ ದಿನಗಳಲ್ಲಿ ಜಾರಿಗೊಳಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.

ಶನಿವಾರ ನಗರದ ದೊಡ್ಡಕಲ್ಲಸಂದ್ರದ ಶಂಕರ್ ಫೌಂಡೇಷನ್‍ನಲ್ಲಿ ಹಮ್ಮಿಕೊಂಡಿದ್ದ ಮಾಸಿಕ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು, ಮಾದಕ ವಸ್ತುಗಳ ಬಳಕೆ ತಡೆಯಲು ಪೆಡ್ಲರ್ ಗಳ ಮೇಲೆ ಪ್ರಿವೆಂಟಿವ್ ಡಿಟೆನ್ಷನ್ ಆಕ್ಟ್ ಮೂಲಕ ಬಂಧಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ವಿದೇಶಿ ಸಂಸ್ಕೃತಿಯ ಪ್ರಭಾವಕ್ಕೆ ಒಳಗಾಗಿ ಇತ್ತೀಚಿನ ಯುವಪೀಳಿಗೆ ವೇಗವಾಗಿ ಮಾದಕ ವಸ್ತುಗಳಿಗೆ ಆಕರ್ಷಣೆಯಾಗುತ್ತಿದೆ. ದುರದೃಷ್ಟಕರ ಎಂದರೆ ಕೆಲವು ವಿದೇಶಗಳಲ್ಲಿ ಕೆಲ ಮಾದಕ ವಸ್ತುಗಳ ಬಳಕೆಗೆ ಅನುವು ಮಾಡಿಕೊಡಲಾಗಿದೆ. ಇದರಿಂದ ಪ್ರಭಾವಿತರಾಗಿ ಯುವಕರು ಫ್ಯಾಶನ್ ರೀತಿ ಇದನ್ನು ಬಳಕೆ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.

ಪೊಲೀಸ್ ಇಲಾಖೆಯು ಈ ಕಾಯ್ದೆಯ ಬಗ್ಗೆ ಸಾಕಷ್ಟು ಜಾಗೃತಿ ಮೂಡಿಸುತ್ತಿದೆ. ಡ್ರಗ್ಸ್ ಪೆಡ್ಲರ್ ಗಳ ಮೇಲೆ ಹೆಚ್ಚೆಚ್ಚು ಪ್ರಕರಣಗಳನ್ನು ದಾಖಲಿಸುತ್ತಿದ್ದು, ಸಾಕಷ್ಟು ಸಂಖ್ಯೆಯ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಕೇವಲ ಗಾಂಜಾ, ಡ್ರಗ್ಸ್ ಮಾತ್ರವಲ್ಲದೆ ಸಿಂಥೆಟಿಕ್ ಡ್ರಗ್ ಗಳಾದ ಕೊಕೇನ್, ಹೆರಾಯಿನ್, ಎಂಬಿಎಂಎನಂತಹ ಅತ್ಯಾಧುನಿಕ ಡ್ರಗ್ಸ್ ಗಳನ್ನು ಸಹ ಅಪಾರ ಪ್ರಮಾಣದಲ್ಲಿ ವಶಪಡಿಸಿಕೊಳ್ಳಲಾಗಿದೆ. ಮಾದಕ ವಸ್ತುಗಳ ಸೇವನೆಯಿಂದ ಬೇಡಿಕೆ ಹೆಚ್ಚಾಗಿರುವುದರಿಂದ ನಗರದಲ್ಲಿ ಹೆಚ್ಚು ಮಾರಾಟ ಜಾಲ ಹಬ್ಬಿದೆ. ಇದು ಕೇವಲ ಪೊಲೀಸ್ ಇಲಾಖೆಯಿಂದ ತಡೆಯಲು ಸಾಧ್ಯವಿಲ್ಲ. ಯುವ ಪೀಳಿಗೆಯಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಸಮಾಜ ಮಾಡಬೇಕು ಎಂದು ಬಿ.ದಯಾನಂದ್ ಹೇಳಿದರು.

ಟ್ರಾಫಿಕ್ ಜಂಕ್ಷನ್‍ಗಳಲ್ಲಿ ಸಿಸಿ ಕ್ಯಾಮೆರಾಗಳ ಜೊತೆ ಲೌಡ್ ಸ್ಪೀಕರ್ ನಂತಹ ಡಿವೈಸ್‍ಗಳನ್ನು ಅಳವಡಿಸಲಾಗಿದ್ದು, ಸಂಚಾರಿ ನಿಯಮ ಉಲ್ಲಂಘನೆ ಮತ್ತು ದಟ್ಟಣೆ ನಿರ್ವಹಣೆಗೆ ಠಾಣೆಯಿಂದಲೇ ಮಾತನಾಡುವ ಮೂಲಕ ತಕ್ಷಣ ಸಮಸ್ಯೆ ಬಗೆಹರಿಯುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಬಿ.ದಯಾನಂದ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X