ಕುಂಭಮೇಳದಲ್ಲಿ ತೀರ್ಥಸ್ನಾನದ ನಕಲಿ ಫೋಟೋ ವೈರಲ್ ; ದೂರು ದಾಖಲಿಸಿದ ನಟ ಪ್ರಕಾಶ್ ರಾಜ್

ಬೆಂಗಳೂರು: ನಟ ಪ್ರಕಾಶ್ ರಾಜ್ ಅವರು ಕುಂಭಮೇಳದಲ್ಲಿ ತೀರ್ಥಸ್ನಾನ ಮಾಡುತ್ತಿರುವ ನಕಲಿ ಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಸ್ಪಷ್ಟನೆ ನೀಡಿದ ಅವರು, ಇದೊಂದು ಸುಳ್ಳು ಸುದ್ದಿ ಎಂದು ಹೇಳಿದ್ದಾರೆ.
ನಟ ಪ್ರಕಾಶ್ ರಾಜ್ ಅವರು ನದಿಯಲ್ಲಿ ಸ್ನಾನ ಮಾಡಿ, ಕೈ ಮುಗಿಯುತ್ತಿರುವ AI ಚಿತ್ರವನ್ನು ಪ್ರಶಾಂತ್ ಸಂಬರಗಿ ಎಂಬ ಹೆಸರಿನ ಖಾತೆಯಿಂದ ಪೋಸ್ಟ್ ಮಾಡಲಾಗಿದ್ದು, ‘‘ಕುಂಭಮೇಳದಲ್ಲಿ ನಟ ಪ್ರಕಾಶ್ ರಾಜ್. ತ್ರಿವೇಣಿ ಸಂಗಮದಲ್ಲಿ ಮಿಂದೆದ್ದರು. ಅವರ ಪಾಪಗಳು ತೊಳೆದು ಹೋಗಲಿ ಎಂದು ಆಶಾಭಾವನೆ ವ್ಯಕ್ತಪಡಿಸೋಣ" ಎಂದು ಬರೆಯಲಾಗಿದೆ.
ಇದಕ್ಕೆ ಪ್ರತಿಕ್ರಿಯಿಸಿರುವ ನಟ ಪ್ರಕಾಶ್ ರಾಜ್ ಇಂದೊಂದು ಸುಳ್ಳು ಸುದ್ದಿ ಎಂದು ಹೇಳಿದ್ದಾರೆ.
ಈ ಕುರಿತು ಎಕ್ಸ್ ಪೋಸ್ಟ್ ಮಾಡಿರುವ ಅವರು, "ಸುಳ್ಳು ಸುದ್ದಿ. “ಸುಳ್ಳ ರಾಜ” ನ ಹೇಡಿಗಳ ಸೈನ್ಯಕ್ಕೆ .. ಅವರ ಪವಿತ್ರ ಪೂಜೆಯಲ್ಲೂ ಸುಳ್ಳು ಸುದ್ದಿ ಹಬ್ಬಿಸಿ ಹೊಲಸು ಮಾಡುವುದೇ ಕೆಲಸ. ಪೊಲೀಸ್ ದೂರು ದಾಖಲಾಗಿದೆ. ಕೋರ್ಟಿನ ಕಟಕಟೆಯಲ್ಲಿ ಏನು ಮಾಡುತ್ತಾರೋ ನೋಡೋಣ" ಎಂದು ಹೇಳಿದ್ದಾರೆ.
ಸುಳ್ಳು ಸುದ್ದಿ“ಸುಳ್ಳ ರಾಜ” ನ ಹೇಡಿಗಳ ಸೈನ್ಯಕ್ಕೆ .. ಅವರ ಪವಿತ್ರ ಪೂಜೆಯಲ್ಲೂ ಸುಳ್ಳು ಸುದ್ದಿ ಹಬ್ಬಿಸಿ ಹೊಲಸು ಮಾಡುವುದೇ ಕೆಲಸ .. police complaint ದಾಖಲಾಗಿದೆ .. ಕೋರ್ಟಿನ ಕಟಕಟೆಯಲ್ಲಿ ಏನು ಮಾಡುತ್ತಾರೋ ನೋಡೋಣ #justasking pic.twitter.com/S6ySeyFKmh
— Prakash Raj (@prakashraaj) January 28, 2025