ಯಲಹಂಕ: ಏರ್ ಶೋ-2025 ಪ್ರಯುಕ್ತ ಮಾಂಸ ಮಾರಾಟ ನಿಷೇಧ

ಸಾಂದರ್ಭಿಕ ಚಿತ್ರ (PTI)
ಬೆಂಗಳೂರು: ಯಲಹಂಕ ವಾಯುನೆಲೆಯಲ್ಲಿ ‘ಏರ್ ಶೋ-2025’ ನಡೆಯುತ್ತಿರುವ ಹಿನ್ನೆಲೆಯಲ್ಲಿ ಜ.23ರಿಂದ ಫೆ.17ರವರೆಗೆ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ ಎಂದು ಬಿಬಿಎಂಪಿ ಯಲಹಂಕ ವಲಯ ಜಂಟಿ ಆಯುಕ್ತ ಮೊಹ್ಮದ್ ನಯೀಮ್ ಮೊಮಿನ್ ತಿಳಿಸಿದ್ದಾರೆ.
ಶನಿವಾರ ಪ್ರಕಟನೆ ಹೊರಡಿಸಿರುವ ಅವರು, ಯಲಹಂಕ ಏರ್ ಫೋರ್ಸ್ ಸ್ಟೇಷನಲ್ಲಿ ಫೆ.10 ರಿಂದ ಫೆ.14ರವರೆಗೆ ಅಂತರಾಷ್ಟ್ರೀಯ ಏರ್ ಶೋ ನಡೆಯಲಿದೆ. ಈ ಸಂಬಂಧ ಯಲಹಂಕ ವಲಯದ ಏರ್ ಫೋರ್ಸ್ ಸ್ಟೇಷನಿಂದ 13 ಕಿ.ಮೀ ವ್ಯಾಪ್ತಿಯಲ್ಲಿ ಬರುವ ಎಲ್ಲ ಮಾಂಸ ಮಾರಾಟದ ಉದ್ದಿಮೆಗಳನ್ನು ಮುಚ್ಚಬೇಕು. ಹೋಟೆಲ್, ಡಾಬಾಗಳಲ್ಲಿ ಮಾಂಸಾಹಾರ ತಯಾರಿಕೆ ಮತ್ತು ಮಾರಾಟ ಮಾಡಬಾರದು ಎಂದು ಹೇಳಿದ್ದಾರೆ.
ಇದನ್ನು ಉಲ್ಲಂಘಿಸಿ ಮಾಂಸ ಮಾರಾಟ ಮಾಡಿದರೆ ಬಿಬಿಎಂಪಿ ಕಾಯ್ದೆ 2020 ಮತ್ತು ಏರ್ ಕ್ರಾಫ್ಟ್ ರೂಲ್ಸ್ 1937 ರ ರೂಲ್ 91 ರಂತೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
Next Story