ಬೆಂಗಳೂರು | ಫೇಸ್ಬುಕ್ನಲ್ಲಿ ನಕಲಿ ಖಾತೆ ಸೃಷ್ಠಿಸಿ ವಂಚನೆಗೆ ಯತ್ನ: ಎಫ್ಐಆರ್ ದಾಖಲು
ಬೆಂಗಳೂರು : ಕೆಪಿಸಿಸಿ ಉಪಾಧ್ಯಕ್ಷ ವಿ.ಆರ್.ಸುದರ್ಶನ್ ಅವರ ಹೆಸರಿನಲ್ಲಿ ಫೇಸ್ಬುಕ್ನಲ್ಲಿ ನಕಲಿ ಖಾತೆ ಸೃಷ್ಠಿಸಿ ಕಿಡಿಗೇಡಿಗಳು ವಂಚನೆಗೆ ಯತ್ನಿಸಿರುವ ಸಂಬಂಧ ನಗರದ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಈ ಬಗ್ಗೆ ಕೆಪಿಸಿಸಿ ಉಪಾಧ್ಯಕ್ಷ ವಿ.ಆರ್.ಸುದರ್ಶನ್ ಅವರು ನೀಡಿದ ದೂರಿನನ್ವಯ ಪ್ರಕರಣ ದಾಖಲಾಗಿದ್ದು, ಪ್ರಕರಣ ಜರುಗಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
‘ಅನಾಮಧೇಯ ವ್ಯಕ್ತಿಗಳು ಫೇಸ್ಬುಕ್ನಲ್ಲಿ ನನ್ನ ಭಾವಚಿತ್ರವನ್ನು ಬಳಸಿಕೊಂಡು ನನ್ನ ಹೆಸರಿನಲ್ಲಿ ನಕಲಿ ಖಾತೆಯೊಂದನ್ನು ಸೃಷ್ಟಿಸಿದ್ದು, ಈ ನಕಲಿ ಖಾತೆಯ ಮೂಲಕ ನನ್ನ ಸ್ನೇಹಿತರಿಗೆ ಹಣ ನೀಡುವಂತೆ ವೈಯಕ್ತಿಕ ಸಂದೇಶ ಕಳುಹಿಸಿದ್ದಾರೆ. ಈ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಜರುಗಿಸಬೇಕು’ ಎಂದು ವಿ.ಆರ್.ಸುದರ್ಶನ್ ಅವರು ದೂರಿನಲ್ಲಿ ತಿಳಿಸಿದ್ದಾರೆ.
Next Story