ಬೆಂಗಳೂರು | ಬಸ್ಗಳಲ್ಲಿ ಪ್ರಯಾಣಿಕರ ಬ್ಯಾಗ್ಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪ : ಓರ್ವ ಬಂಧನ
ಬೆಂಗಳೂರು: ರಾತ್ರಿ ಸಂಚರಿಸುವ ವೋಲ್ವೋ ಬಸ್ಗಳಲ್ಲಿ ಪ್ರಯಾಣಿಕರ ಬ್ಯಾಗ್ಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಇಲ್ಲಿನ ಸುಬ್ರಹ್ಮಣ್ಯನಗರ ಠಾಣೆ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.
ಬೇರೆ ಬೇರೆ ಭಾಗಗಳಿಂದ ಬೆಂಗಳೂರಿಗೆ ಹೋಗುವ ಬಸ್ ಹತ್ತುತ್ತಿದ್ದ ಆರೋಪಿ, ಬೆಳಗಿನ ಜಾವ ನಿದ್ದೆ ಮಂಪರಿನಲ್ಲಿರುವ ಬೇರೆ ಪ್ರಯಾಣಿಕರ ಬ್ಯಾಗ್ ಸಮೇತ ಕೆಳಗಿಳಿಯುತ್ತಿದ್ದ. ಬಳಿಕ ಅದರಲ್ಲಿರುವ ಹಣ, ಚಿನ್ನಾಭರಣ ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ಕದ್ದು ಪರಾರಿಯಾಗುತ್ತಿದ್ದ ಎನ್ನಲಾಗಿದೆ.
2023ರ ನವೆಂಬರ್ನಲ್ಲಿ ಮಂಗಳೂರಿನಿಂದ ಬಸ್ ಹತ್ತಿದ್ದ ಆರೋಪಿ, ಬೆಂಗಳೂರಿನ ನವರಂಗ್ ನಿಲ್ದಾಣದ ಬಳಿ ಪ್ರಯಾಣಿಕರೊಬ್ಬರ ಬ್ಯಾಗ್ ಕದ್ದು ಇಳಿದಿದ್ದ. ಬಳಿಕ ಅದರಲ್ಲಿದ್ದ 300 ಗ್ರಾಂ ಚಿನ್ನಾಭರಣ ಅಡವಿಟ್ಟು ಹಣ ಪಡೆದುಕೊಂಡಿದ್ದನು ಎಂದು ಹೇಳಲಾಗಿದೆ.
ಇತ್ತ ಬ್ಯಾಗ್ ಕಳೆದುಕೊಂಡ ಪ್ರಯಾಣಿಕರು ಸುಬ್ರಮಣ್ಯ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಪ್ರಾರಂಭಿಸಿ ಇದೀಗ ಮೈಸೂರಿನಲ್ಲಿ ಆರೋಪಿಯನ್ನು ಬಂಧಿಸಿದ್ದು, ಕ್ರಮ ಜರುಗಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.