ಬೆಂಗಳೂರು | ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ
ಬೆಂಗಳೂರು : ನಗರದದಲ್ಲಿ ಇಂಜಿಯರಿಂಗ್ ವಿದ್ಯಾರ್ಥಿಯೊಬ್ಬ ಆರನೇ ಅಂತಸ್ತಿನ ಕಟ್ಟದಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ.
ಆಂಧ್ರಪ್ರದೇಶದ ಕರ್ನೂಲಿನ ಕುಟುಂಬದ ಕರಸಾಲ ರಾಹುಲ್(21) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಕೆಲ ವರ್ಷಗಳಿಂದ ರಾಹುಲ್ ಕುಟುಂಬ ಬಳ್ಳಾರಿಯಲ್ಲಿ ನೆಲೆಸಿತ್ತು. ರಾಹುಲ್ ತನ್ನ ತಾಯಿಯೊಂದಿಗೆ ಕ್ಯಾಂಪಸ್ನಿಂದ 4 ಕಿ.ಮೀ ದೂರದಲ್ಲಿರುವ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ. ನಿನ್ನೆ ಪರೀಕ್ಷೆಗೆ ತಡವಾಗಿ ಬಂದ ಕಾರಣ ಪ್ರವೇಶ ನಿರಾಕರಿಸಲಾಗಿತ್ತು. ಅಧ್ಯಯನದಲ್ಲಿ ಅತ್ಯುತ್ತಮವಾಗಿ ನಿರ್ವಹಿಸುತ್ತಿದ್ದ ರಾಹುಲ್, ಇದರಿಂದ ನೊಂದಿದ್ದ ಎನ್ನಲಾಗಿದೆ.
ನಂತರ ಸ್ವಲ್ಪ ಹೊತ್ತಿನ ಬಳಿಕ ಕಾಲೇಜಿನ ಮಹಡಿಯಿಂದ ಕೆಳಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಪರಪ್ಪನ ಅಗ್ರಹಾರ ಪೊಲೀಸರು ಭೇಟಿ ನೀಡಿದ್ದಾರೆ.
Next Story