Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರು| ವಿಮಾನದಲ್ಲಿ ಪರ್ಸ್...

ಬೆಂಗಳೂರು| ವಿಮಾನದಲ್ಲಿ ಪರ್ಸ್ ಕಳೆದುಕೊಂಡು, ಪತ್ತೆ ಹಚ್ಚಲು ಬಾಂಬ್ ಬೆದರಿಕೆ: ಪ್ರಯಾಣಿಕ ಸೆರೆ

ವಾರ್ತಾಭಾರತಿವಾರ್ತಾಭಾರತಿ28 Dec 2023 7:44 PM IST
share
ಬೆಂಗಳೂರು| ವಿಮಾನದಲ್ಲಿ ಪರ್ಸ್ ಕಳೆದುಕೊಂಡು, ಪತ್ತೆ ಹಚ್ಚಲು ಬಾಂಬ್ ಬೆದರಿಕೆ: ಪ್ರಯಾಣಿಕ ಸೆರೆ

ಬೆಂಗಳೂರು: ಸ್ಪೈಸ್‌ ಜೆಟ್ ವಿಮಾನದಲ್ಲಿ ಹೊಸದಿಲ್ಲಿಯಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರು ವಿಮಾನದಲ್ಲಿ ತಮ್ಮ ಪರ್ಸ್ ಕಳೆದುಕೊಂಡಿದ್ದು, ಈ ಬಗ್ಗೆ ಕಾಲ್ ಸೆಂಟರ್ ಸಿಬ್ಬಂದಿಗೆ ದೂರು ನೀಡಿದ್ದಾರೆ. ಆದರೆ ತನ್ನ ದೂರನ್ನು ಗಂಭೀರವಾಗಿ ಪರಿಗಣಿಸದ ಸಿಬ್ಬಂದಿ ವಿರುದ್ಧ ಆಕ್ರೋಶಗೊಂಡ ಪ್ರಯಾಣಿಕ, ತನ್ನ ಪರ್ಸ್ ನಲ್ಲಿ ಬಾಂಬ್ ಇದೆ ಎಂದು ಬೆದರಿಕೆ ಹಾಕಿದ ಘಟನೆ ವರದಿಯಾಗಿದೆ.

ಪ್ರಯಾಣಿಕ ಶ್ರೇಯಾಂಶ್ ಚಮಾರಿಯಾ ಎಂಬುವರು ತಮ್ಮ ಪರ್ಸ್ ನಲ್ಲಿ ಬಾಂಬ್ ಇದೆ ಎಂದು ಬೆದರಿಕೆ ಹಾಕಿದ್ದರು. ಹೀಗಾಗಿ ಡಿ.27ರಂದು ಆರೋಪಿಯನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರು ಬಂಧಿಸಿರುವುದಾಗಿ ಗೊತ್ತಾಗಿದೆ.

ಡಿ.26ರಂದು ಬೆಳಗ್ಗೆ 9.20ಕ್ಕೆ ಶ್ರೇಯಾಂಶ್ ಚಮಾರಿಯಾ ಅವರು ಎಸ್ಜಿ 8536 ವಿಮಾನದ ಮೂಲಕ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಈ ವೇಳೆ ತಮ್ಮ ಪರ್ಸ್ ಕಾಣೆಯಾಗಿದೆ ಎಂದು ಅರಿತ ಅವರು ಗುರುಗ್ರಾಮ್ನಲ್ಲಿರುವ ಸ್ಪೈಸ್‌ ಜೆಟ್ ಕಾಲ್ ಸೆಂಟರ್ ಗೆ ಬೆಳಗ್ಗೆ 10.16ಕ್ಕೆ ಕರೆ ಮಾಡಿದ್ದಾರೆ. ಕರೆಗೆ ಉತ್ತರಿಸಿದ ವ್ಯಕ್ತಿ ಅವರಿಗೆ ಎಂದಿನಂತೆ ಪ್ರಶ್ನೆಗಳನ್ನು ಕೇಳಿದ್ದಾರೆ ಮತ್ತು ಕಾಲ್ ಅನ್ನು ಹೊಲ್ಡ್ ಮಾಡಿದ್ದಾರೆ. ತನ್ನ ಕರೆಯನ್ನು ಗಂಭೀರವಾಗಿ ಪರಿಗಣಿಸಲಿಲ್ಲ ಮತ್ತು ಪರ್ಸ್ ಮರಳಿ ಪಡೆಯಲು ಸಾಧ್ಯವಾಗದೆ ಹತಾಶನಾಗಿ, ಅದರಲ್ಲಿ ಬಾಂಬ್ ಇದೆ ಮತ್ತು ಅದನ್ನು ತಕ್ಷಣವೇ ಪತ್ತೆ ಮಾಡುವಂತೆ ಕೇಳಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಕಾಲ್ ಸೆಂಟರ್ ಸಿಬ್ಬಂದಿ ಬಾಂಬ್ ಇರುವ ಸ್ಥಳವನ್ನು ಕೇಳಿದಾಗ, ಪ್ರಯಾಣಿಕ ಶ್ರೇಯಾಂಶ್ ಚಮಾರಿಯಾ, ಉತ್ತರಿಸಿ, ‘ನಾನು ನಿಮಗೆ ಹೇಳುವುದಿಲ್ಲ. ಅದು ಯಾವಾಗ ಬೇಕಾದಾರೂ ಸ್ಫೋಟವಾಗಬಹುದು’ ಎಂದು ಹೇಳಿದ್ದಾನೆ. ತಕ್ಷಣ ಸ್ಪೈಸ್ ಜೆಟ್ ಅಧಿಕಾರಿಗಳು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಪೈಸ್ ಜೆಟ್ ಸಿಬ್ಬಂದಿಗಳು ಬೆಳಗ್ಗೆ 10.59ಕ್ಕೆ ವಿಮಾನದೊಳಗೆ ಪರ್ಸ್ ಅನ್ನು ಪತ್ತೆಹಚ್ಚಿ ನಂತರ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್ಎಫ್) ಮಾಹಿತಿ ನೀಡಿದ್ದು, ಅವರು ವಿಶೇಷ ಬಾಂಬ್ ಪತ್ತೆ ತಂಡವನ್ನು ಕರೆಯಿಸಿ ಪರಿಶೀಲಿಸಿ, ಹುಸಿ ಬಾಂಬ್ ಕರೆ ಎಂದು ಹೇಳಿದ್ದಾರೆ.

ಗಾರ್ಮೆಂಟ್ ವ್ಯಾಪಾರ ನಡೆಸುತ್ತಿದ್ದ ಪ್ರಯಾಣಿಕನನ್ನು ವಿಮಾನ ನಿಲ್ದಾಣದ ಪೊಲೀಸರು ಸ್ಪೈಸ್‌ ಜೆಟ್ ಕೌಂಟರ್ ಬಳಿ ಬಂಧಿಸಿ ನಂತರ ಜಿಲ್ಲಾ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X