ಬೆಂಗಳೂರು | ರೇವ್ ಪಾರ್ಟಿ ಪ್ರಕರಣ : ವಿಚಾರಣೆಗೆ ಹಾಜರಾಗಲು ಕಾಲಾವಕಾಶ ಕೇಳಿದ ನಟಿ ಹೇಮಾ
Photo: Kolla Hema/Instagram)
ಬೆಂಗಳೂರು : ನಗರದ ಹೊರವಲಯದಲ್ಲಿರುವ ಫಾರ್ಮ್ಹೌಸ್ನಲ್ಲಿ ನಡೆದ ರೇವ್ ಪಾರ್ಟಿಯಲ್ಲಿ ಡ್ರಗ್ಸ್ ಸೇವಿಸಿದ ಆರೋಪದಡಿ ತೆಲುಗು ನಟಿ ಹೇಮಾ ಸಿಸಿಬಿ ಪೊಲೀಸರ ಎದುರು ವಿಚಾರಣೆಗೆ ಹಾಜರಾಗಲು ಒಂದು ವಾರ ಕಾಲಾವಕಾಶ ಕೇಳಿರುವುದಾಗಿ ವರದಿಯಾಗಿದೆ.
ನಗರದ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಇತ್ತೀಚಿಗೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಪ್ರಕರಣ ಸಂಬಂಧ ನಟಿ ಸೇರಿ 8 ಮಂದಿಗೆ ಮೇ 27ರ ಸೋಮವಾರ ವಿಚಾರಣೆ ಹಾಜರಾಗಲು ಸಿಸಿಬಿ ನೋಟಿಸ್ ನೀಡಿತ್ತು. ಆದರೆ, ಅನಾರೋಗ್ಯದಿಂದಾಗಿ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ. ಸಮಯಾವಕಾಶ ನೀಡಿ ಎಂಬುದಾಗಿ ನಟಿ ಹೇಮಾ ತಿಳಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
Next Story