ಬೆಂಗಳೂರು | ಸಂಚಾರ ನಿಯಮ ಉಲ್ಲಂಘನೆ: 50 ಸಾವಿರ ರೂ.ಗೂ ಅಧಿಕ ದಂಡ ಬಾಕಿ ಉಳಿಸಿಕೊಂಡಿದ್ದ ವಾಹನಗಳ ಜಪ್ತಿ
ಸಾಂದರ್ಭಿಕ ಚಿತ್ರ
ಬೆಂಗಳೂರು: ಸಂಚಾರ ನಿಯಮಗಳನ್ನು ಪದೇ ಪದೇ ಉಲ್ಲಂಘಿಸಿ ದಂಡ ಪಾವತಿಸದೇ ಇದ್ದ 50 ಸಾವಿರ ರೂ.ಗಳಿಗೂ ಅಧಿಕ ಮೊತ್ತದ ಬಾಕಿ ಉಳಿಸಿಕೊಂಡಿದ್ದ ವಾಹನಗಳ ಪತ್ತೆಗೆ ವಿಶೇಷ ಕಾರ್ಯಾಚರಣೆ ನಡೆಸಿದ ದಕ್ಷಿಣ ವಿಭಾಗದ ಸಂಚಾರ ಪೊಲೀಸರು ಒಟ್ಟು 84 ದ್ವಿಚಕ್ರ ವಾಹನ ಹಾಗೂ ಒಂದು ಕಾರನ್ನು ವಶಕ್ಕೆ ಪಡೆದಿದ್ದಾರೆ.
ಮೇಲ್ಕಂಡ ವಿಭಾಗದಲ್ಲಿನ ಈ ವಾಹನಗಳ ಮೇಲೆ ಒಟ್ಟು 10,210 ವಿವಿಧ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ದಾಖಲಾಗಿದ್ದು, ಈ ವಾಹನಗಳ ಮೇಲೆ ಒಟ್ಟು 1.74ಕೋಟಿ ರೂ.ದಂಡದ ಮೊತ್ತ ಬಾಕಿ ಇದ್ದು, ಪೊಲೀಸರು ಮುಂದಿನ ಸೂಕ್ತ ಕಾನೂನು ಕ್ರಮ ಜರುಗಿಸಲಿದ್ದಾರೆ ಎಂದು ತಿಳಿಸಲಾಗಿದೆ.
ಅಧಿಕಾರಿಗಳ ಸೂಚನೆ ಆಧರಿಸಿ ಸಂಚಾರ ನಿಯಮಗಳನ್ನು ಪದೇ ಪದೇ ಉಲ್ಲಂಘಿಸಿದ 50 ಸಾವಿರ ರೂ.ಗಳಿಗೂ ಅಧಿಕ ದಂಡದ ಮೊತ್ತವನ್ನು ಬಾಕಿ ಉಳಿಸಿಕೊಂಡಿದ್ದ ವಾಹನಗಳನ್ನು ಪತ್ತೆ ಮಾಡಲು ಸಂಚಾರ ದಕ್ಷಿಣ ವಿಭಾಗದ ಎಲ್ಲಾ ಸಹಾಯಕ ಪೊಲೀಸ್ ಆಯುಕ್ತರು ಮತ್ತು ಇನ್ಸ್ಪೆಕ್ಟರ್ ಗಳಿಗೆ ಸೂಚಿಸಲಾಗಿತ್ತು.
Next Story