ಬೆಂಗಳೂರು| 33ನೇ ಮಹಡಿಯಿಂದ ಬಿದ್ದು ಇಂಜಿನಿಯರ್ ಯುವಕ ಮೃತ್ಯು
ದಿಪಾಂಶು ಶರ್ಮಾ
ಬೆಂಗಳೂರು: ಸಾಫ್ಟ್ ವೇರ್ ಇಂಜಿನಿಯರ್ ಯುವಕನೊಬ್ಬ ಅಪಾರ್ಟ್ಮೆಂಟ್ನಿಂದ ಬಿದ್ದು ಮೃತಪಟ್ಟಿರುವ ಘಟನೆ ಕೆ.ಆರ್ ಪುರದ ಅಯ್ಯಪ್ಪನಗರದಲ್ಲಿ ನಿನ್ನೆ(ಡಿ.29) ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ನಗರದ ಖಾಸಗಿ ಕಂಪನಿಯಲ್ಲಿ ಇಂಜಿನಿಯರ್ ಆಗಿದ್ದ ದಿಪಾಂಶು ಶರ್ಮಾ ಎಂಬುವವರು ಅಪಾರ್ಟ್ಮೆಂಟ್ನ 33ನೇ ಮಹಡಿಯಿಂದ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಈ ಬಗ್ಗೆ ಅವರ ತಂದೆ ಚಮನ್ ಶರ್ಮಾ ದೂರು ನೀಡಿದ್ದಾರೆ.
ಘಟನೆ ಸಂಬಂಧ ಕೆ.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯು ಪ್ರಗತಿಯಲ್ಲಿದೆ ಎಂದು ಪೋಲಿಸರು ತಿಳಿಸಿದ್ದಾರೆ.
Next Story