ಶಾಲಾ-ಕಾಲೇಜುಗಳ ಶೈಕ್ಷಣಿಕ ಪ್ರವಾಸ ಸೇರಿದಂತೆ ಇತರೆ ಖರ್ಚುಗಳಿಗೆ ಹಣ ಬಿಡುಗಡೆ ಮಾಡಿದ ಬಿಬಿಎಂಪಿ
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಶಾಲಾ-ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 7ನೇ ತರಗತಿ, 10ನೇ ತರಗತಿ, ದ್ವಿತೀಯ ಪಿಯುಸಿ ಮತ್ತು ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ 2023-24ನೆ ಸಾಲಿನ ಶೈಕ್ಷಣಿಕ ಪ್ರವಾಸಕ್ಕೆ ಹೋಗಿ ಬರುವ ವೆಚ್ಚವನ್ನು ಹಾಗೂ ಶಾಲಾ-ಕಾಲೇಜುಗಳ ವಾರ್ಷಿಕೋತ್ಸವ, ಪ್ರಶ್ನೆ ಪತ್ರಿಕೆಯ ಮುದ್ರಣ ವೆಚ್ಚವನ್ನು ಬಿಬಿಎಂಪಿ ಭರಿಸುತ್ತಿದ್ದು, ಶಾಲಾ-ಕಾಲೇಜುಗಳ ಮುಖ್ಯಸ್ಥರ ಬ್ಯಾಂಕಿಗೆ ಹಣವನ್ನು ವರ್ಗಾವಣೆ ಮಾಡಿದೆ.
ಶೈಕ್ಷಣಿಕ ಪ್ರವಾಸಕ್ಕೆ ಹೋಗುವ 7ನೇ ತರಗತಿಯ ಪ್ರತಿ ವಿದ್ಯಾರ್ಥಿಗೆ ಒಂದು ಸಾವಿರ ರೂ.ಗಳನ್ನು, 10ನೆ ತರಗತಿಯ ಪ್ರತಿ ವಿದ್ಯಾರ್ಥಿಗೆ 1,200 ರೂ.ಗಳನ್ನು, ದ್ವಿತೀಯ ಪಿಯುಸಿಯ ಪ್ರತಿ ವಿದ್ಯಾರ್ಥಿಗೆ 1,500 ರೂ.ಗಳನ್ನು, ಅಂತಿಮ ವರ್ಷದ ಪದವಿ ಮತ್ತು ಸ್ನಾತಕೋತ್ತರ ಪದವಿಯ ಪ್ರತಿ ವಿದ್ಯಾರ್ಥಿಗೆ 1,500 ರೂ.ಗಳನ್ನು ಭರಿಸಲಾಗುತ್ತಿದೆ.
ಇನ್ನು ಉಳಿದಂತೆ ಶಾಲಾ-ಕಾಲೇಜುಗಳ ವಾರ್ಷಿಕೋತ್ಸವ, ಪ್ರಶ್ನೆ ಪತ್ರಿಕೆಯ ಮುದ್ರಣ ವೆಚ್ಚ ಸೇರಿದಂತೆ ಇತರೆ ವೆಚ್ಚವನ್ನು ಭರಿಸಲು ಪ್ರತಿ ವಿದ್ಯಾರ್ಥಿಗೆ 150 ರೂ.ಗಳಿಂದ 200 ರೂ.ಗಳ ವರೆಗೆ ಬಿಡುಗಡೆ ಮಾಡಲಾಗಿದೆ ಎಂದು ಬಿಬಿಎಂಪಿ ತಿಳಿಸಿದೆ.