ಶಿವರಾತ್ರಿ ಹಬ್ಬ: ಫೆ.26ರಂದು ಬೆಂಗಳೂರಿನಲ್ಲಿ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ

ಬೆಂಗಳೂರು: ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಫೆ.26ರಂದು ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ಸೋಮವಾರದಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯ ಎಲ್ಲ ಕಸಾಯಿಖಾನೆಗಳನ್ನು ಮುಚ್ಚುವಂತೆ ಆದೇಶಿಸಿದ್ದು, ಒಂದು ವೇಳೆ ಆದೇಶ ಉಲ್ಲಂಘಿಸಿದ್ದು ಕಂಡುಬಂದರೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬಿಬಿಎಂಪಿ ಎಚ್ಚರಿಕೆ ನೀಡಿದೆ.
Next Story