ಅಂಗನವಾಡಿಗಳಿಗೆ ಅಲ್ಪಸಂಖ್ಯಾತ ಸಮುದಾಯದ ಭಾಷೆ ಬಲ್ಲವರ ನೇಮಕ | ಮಾರ್ಗಸೂಚಿ ಬಿಜೆಪಿ ಸರಕಾರದ್ದು: ಇಲಾಖೆ ಸ್ಪಷ್ಟನೆ
ಸಾಂದರ್ಭಿಕ ಚಿತ್ರ
ಬೆಂಗಳೂರು : ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಕೆಲ ಅಂಗನವಾಡಿ ಹುದ್ದೆಗಳಿಗೆ ಉರ್ದು ಭಾಷೆ ಕಡ್ಡಾಯಗೊಳಿಸಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ ಎಂದು ಸಂಸದ ತೇಜಸ್ವಿ ಸೂರ್ಯ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದಿದ್ದು, ಹಿಂದಿನ ಬಿಜೆಪಿ ಸರಕಾರದಲ್ಲಿ ಈ ಮಾರ್ಗಸೂಚಿ ಹೊರಡಿಸಲಾಗಿದೆ ಎಂದು ಇಲಾಖೆ ಸ್ಪಷ್ಟಿಕರಣ ನೀಡಿದೆ.
2022ರಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿ ಹುದ್ದೆಗೆ ಶೇ.21ರಷ್ಟು ಅಲ್ಪಸಂಖ್ಯಾತ ಸಮುದಾಯದ ಜನಸಂಖ್ಯೆ ಇರುವ ಪ್ರದೇಶದ ಅಂಗನವಾಡಿ ಕೇಂದ್ರಗಳಲ್ಲಿ ಕನ್ನಡ ಭಾಷೆಯೊಂದಿಗೆ ಆಯಾ ಅಲ್ಪಸಂಖ್ಯಾತ ಸಮುದಾಯದ ಭಾಷೆ ಬಲ್ಲವರನ್ನು ಕಾರ್ಯಕರ್ತೆ/ಸಹಾಯಕಿ ಹುದ್ದೆಗೆ ಆಯ್ಕೆ ಮಾಡಬೇಕು ಎಂದು ಅಂದಿನ ಬಿಜೆಪಿ ಸರಕಾರ ಮಾರ್ಗಸೂಚಿ ಪ್ರಕಟಿಸಿತ್ತು.
Next Story