ಬೆಂಗಳೂರು | ನಿರ್ಮಾಣ ಹಂತ ಕಟ್ಟಡದಿಂದ ಬಿದ್ದು ಕಾರ್ಮಿಕ ಮೃತ್ಯು
ಸಾಂದರ್ಭಿಕ ಚಿತ್ರ
ಬೆಂಗಳೂರು: ನಿರ್ಮಾಣ ಹಂತ ಕಟ್ಟಡದ ಏಳನೆ ಅಂತಸ್ತಿನಿಂದ ಇಬ್ಬರು ಕಾರ್ಮಿಕರು ಬಿದ್ದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಿಲಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.
ಶನಿವಾರ ಈ ಘಟನೆ ನಡೆದಿದ್ದು, ಕಲಬುರಗಿ ಮೂಲದ ಶರಣಪ್ಪ ಸಾವನ್ನಪಿದ ಕಾರ್ಮಿಕ ಎಂದು ಪೊಲೀಸರು ಗುರುತಿಸಿದ್ದಾರೆ. ಘಟನೆಯಲ್ಲಿ ಚಂದ್ರಪ್ಪ ಎಂಬವರು ಗಂಭೀರವಾಗಿ ಗಾಯಗೊಂಡು ಜಯನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ತಿಲಕ್ ನಗರದ ಜಿಎನ್ಆರ್ ಕಲ್ಯಾಣ ಮಂಟಪ ಹತ್ತಿರದ ನಿರ್ಮಾಣ ಹಂತದ ಕಟ್ಟಡವೊಂದದಲ್ಲಿ ಇಬ್ಬರು ಕಾರ್ಮಿಕರು ಎಂದಿನಂತೆ ಕೆಲಸ ಮಾಡುತ್ತಿದ್ದರು. ಆದರೆ, ಶನಿವಾರ ಏಳನೆ ಅಂತಸ್ತಿನಲ್ಲಿ ಮರದ ದಿಂಬೆಗಳನ್ನು ಹಗ್ಗದಿಂದ ಕಟ್ಟಿ ಅದರ ಸಹಾಯದಿಂದ ನಿಂತುಕೊಂಡು ಸಿಮೆಂಟಿಂಗ್ ಕೆಲಸ ಮಾಡುತ್ತಿದಾಗ ಏಕಾಏಕಿ ಮಹಡಿಯಿಂದ ಇಬ್ಬರು ಕಾರ್ಮಿಕರು ಬಿದ್ದು ಈ ಘಟನೆ ಸಂಭವಿಸಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಆತ್ಮಹತ್ಯೆ: ಮತ್ತೊಂದು ಪ್ರಕರಣದಲ್ಲಿ ಅಪಾರ್ಟ್ಮೆಂಟ್ನ 16ನೆ ಮಹಡಿಯಿಂದ ಹಾರಿ ಓರ್ವ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಗರದ ಯಲಹಂಕದ ಆರ್ಎಂಝಡ್ ಗ್ಯಾಲರಿಯಾ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ.
ರವಿಕುಮಾರ್ ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸದ್ಯ ಸ್ಥಳಕ್ಕೆ ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.