ಬೆಂಗಳೂರು | ಬಯೋ ಇನೋವೇಷನ್ ಸೆಂಟರ್ನಲ್ಲಿ ಅಗ್ನಿ ಅವಘಡ: 150 ಕೋಟಿ ರೂ.ಗೂ ಹೆಚ್ಚು ನಷ್ಟ
ಬೆಂಗಳೂರು : ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಬಯೋ ಇನ್ನೋವೇಶನ್ ಸೆಂಟರ್ನಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಿಂದಾಗಿ ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿರುವ ಘಟನೆ ಮಂಗಳವಾರ ನಡೆದಿದೆ.
ಸೆಂಟರ್ನಲ್ಲಿ ಯಾರೂ ಇರದಿದ್ದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಅಂದಾಜು 150 ಕೋಟಿ ರೂ. ಅಧಿಕ ಮೌಲ್ಯದ ವಸ್ತುಗಳು ನಾಶವಾಗಿದೆ ಎಂದು ಹೇಳಲಾಗಿದೆ. ಕೆಮಿಕಲ್ ಅಥವಾ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿರಬಹುದೆಂದು ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story