ಬೆಂಗಳೂರು | ಪೊಲೀಸರಿಂದ ಹಲ್ಲೆ, ಕಿರುಕುಳ ಆರೋಪ: ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಬೆಂಗಳೂರು: ಚನ್ನರಾಯಪಟ್ಟಣ ಠಾಣೆ ಪೊಲೀಸರು ಹೊಡೆದು, ಕಿರುಕುಳ ನೀಡಿದ್ದು, ತನಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿವಿಧಾನಸೌಧ ಮುಂದೆ ವಿಷ ಸೇವಿಸಲು ಯತ್ನಿಸಿದ ಯುವಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಮೂಲದ ಸಂಜಯ್ ಎಂಬಾತ ನನಗೆ ನ್ಯಾಯಬೇಕೆಂದು ವಿಧಾನಸಸೌಧದ ಮುಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಕೂಡಲೇ ಪೊಲೀಸರು ತಡೆದು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದು, ಬಳಿಕ ಸಂಜಯ್ನನ್ನು ವಿಧಾನಸೌಧ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಚನ್ನರಾಯಪಟ್ಟಣ ಠಾಣೆ ಪೊಲೀಸರು ಹೊಡೆದು ಕಿರುಕುಳ ನೀಡಿದ್ದು, ನನಗೆ ನ್ಯಾಯಬೇಕೆಂದು ಸಂಜಯ್ ಆತ್ಮಹತ್ಯಗೆ ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ.
Next Story