ಬೆಂಗಳೂರು | ಅಗ್ನಿ ಅವಘಡ: 20ಕ್ಕೂ ಹೆಚ್ಚು ಶೆಡ್ಗಳು ಬೆಂಕಿಗಾಹುತಿ
ಸಾಂದರ್ಭಿಕ ಚಿತ್ರ
ಬೆಂಗಳೂರು: ಉತ್ತರ ಬೆಂಗಳೂರಿನ ನಾಗವರ ಸಮೀಪದ ವೀರಣ್ಣಪಾಳ್ಯದಲ್ಲಿ ಶನಿವಾರ ಸಂಜೆ ಸಂಭವಿಸಿದ ಅಗ್ನಿ ಅವಘಡದಲ್ಲಿ 20ಕ್ಕೂ ಹೆಚ್ಚು ಶೆಡ್ಗಳು ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ನಡೆದಿದೆ.
ಆಟಿಕೆ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರಿಗಾಗಿ ವೀರನಪಾಳ್ಯ ಮುಖ್ಯ ರಸ್ತೆಯ ಖಾಸಗಿ ಶಾಲೆ ಪಕ್ಕದಲ್ಲಿದ್ದ ಶೆಡ್ಗಳನ್ನು ನಿರ್ಮಿಸಲಾಗಿತ್ತು. ಮೊದಲಿಗೆ ಒಂದು ಶೆಡ್ನಲ್ಲಿ ಬೆಂಕಿ ಕಾಣಿಸಿಕೊಂಡು ಬಳಿಕ ಇತರೆ ಶೆಡ್ಗಳಿಗೂ ಹಬ್ಬಿದೆ ಎನ್ನಲಾಗಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಜನರು ಹೊರಗೆ ಓಡಿ ಬಂದಿದ್ದಾರೆ. 20ಕ್ಕೂ ಹೆಚ್ಚು ಶೆಡ್ಗಳು ಬೆಂಕಿಗೆ ಆಹುತಿಯಾಗಿದೆ. ಶೆಡ್ನಲ್ಲಿದ್ದ ಸಾಮಗ್ರಿಗಳು ಸಂಪೂರ್ಣ ಸುಟ್ಟುಹೋಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ಘಟನೆ ಸಂಬಂಧ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.
ಗೋವಿಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Next Story