ಬೆಂಗಳೂರು | ಆರು ವರ್ಷದ ಬಾಲಕಿಯ ಅತ್ಯಾಚಾರ ಎಸಗಿ ಹತ್ಯೆ: ಆರೋಪಿಯ ಬಂಧನ
ಸಾಂದರ್ಭಿಕ ಚಿತ್ರ
ಬೆಂಗಳೂರು: ಆರು ವರ್ಷದ ಬಾಲಕಿಯನ್ನು ಅತ್ಯಾಚಾರ ಎಸಗಿ ಕೊಲೆಗೈದಿರುವ ಅಮಾನುಷ ಕೃತ್ಯ ಬೆಂಗಳೂರಿನ ರಾಮಮೂರ್ತಿನಗರದ ಹೊಯ್ಸಳ ನಗರ ಎಂಬಲ್ಲಿ ಸೋಮವಾರ ಮುಸ್ಸಂಜೆ ವೇಳೆ ನಡೆದಿದೆ.
ಬಿಹಾರ ಮೂಲದ ಅಭಿಷೇಕ್ ಕುಮಾರ್ (25) ಅತ್ಯಾಚಾರ, ಕೊಲೆ ಆರೋಪಿ. ಈತನನ್ನು ಸ್ಥಳೀಯರೇ ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಬಾಲಕಿಯ ಪೋಷಕರು ಕೂಲಿ ಕಾರ್ಮಿಕರಾಗಿದ್ದು, ಸೋಮವಾರ ಗಾರೆ ಕೆಲಸಕ್ಕೆ ಹೋಗಿದ್ದರು. ಈ ಹಿನ್ನೆಲೆಯಲ್ಲಿ ಮನೆಯಲ್ಲಿ ಯಾರು ಇರಲಿಲ್ಲ. ಈ ವೇಳೆ ಮನೆಗೆ ಬಂದಿದ್ದ ಆರೋಪಿ ಅಭಿಷೇಕ್ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿ ಕೊಲೆಗೈದಿದ್ದಾನೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ರಾಮಮೂರ್ತಿನಗರ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿ ಅಭಿಷೇಕ್ ಕೂಡ ಗಾರೆ ಕೆಲಸಗಾರ ಎಂದು ತಿಳಿದುಬಂದಿದೆ.
Next Story