ಬೆಂಗಳೂರು : ರೈಲಿನಲ್ಲಿ ಲ್ಯಾಪ್ಟಾಪ್ ಕಳ್ಳತನ ಮಾಡುತ್ತಿದ್ದ ಆರೋಪಿ ಸೆರೆ
ಸಾಂದರ್ಭಿಕ ಚಿತ್ರ
ಬೆಂಗಳೂರು: ರೈಲಿನಲ್ಲಿ ಪ್ರಯಾಣಿಕರ ಲ್ಯಾಪ್ಟಾಪ್ಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಇಲ್ಲಿನ ರೈಲ್ವೆ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.
ಬಂಧಿತ ಆರೋಪಿಯನ್ನು ಬೆಳಗಾವಿ ಮೂಲದ ಭೀಮಪ್ಪ ದುಂಡಪ್ಪ ಬೀರಾಜ(19) ಎಂದು ಗುರುತಿಸಲಾಗಿದೆ. ಆರೋಪಿಯು ಫೆ.1ರಂದು ಘಟಪ್ರಭಾದಿಂದ ಬೆಂಗಳೂರಿಗೆ ಬರುತ್ತಿದ್ದ ರೈಲಿನಲ್ಲಿ ಪ್ರಯಾಣಿಕರೊಬ್ಬರು ಮಲಗಿದ್ದ ವೇಳೆಯಲ್ಲಿ ಅವರ ಲ್ಯಾಪ್ಟಾಪ್ ಮತ್ತಿತರ ವಸ್ತುಗಳನ್ನು ಕಳ್ಳತನ ಮಾಡಿದ್ದ. ಈ ಕುರಿತು ಅರಸೀಕೆರೆ ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಫೆ.6ರ ಬೆಳಗಿನ ಜಾವ ಬೀರೂರು ರೈಲ್ವೆ ನಿಲ್ದಾಣದಲ್ಲಿ ವೇಟಿಂಗ್ ಹಾಲ್ನಲ್ಲಿ ಕುಳಿತಿದ್ದ ಆರೋಪಿಯನ್ನು ಗಮನಿಸಿದ್ದ ರೈಲ್ವೆ ಪೊಲೀಸರು ಅನುಮಾನಗೊಂಡು ವಶಕ್ಕೆ ಪಡೆದಿದ್ದರು. ಈ ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದಾಗ ಇತರೆ ಕಳ್ಳತನ ಪ್ರಕರಣಗಳು ಬಯಲಾಗಿವೆ. ಆರೋಪಿಯಿಂದ ಡೆಲ್ ಕಂಪೆನಿಯ 4, ಎಚ್.ಪಿ. ಕಂಪೆನಿಯ 3, ಲೆನೊವೋ ಕಂಪೆನಿಯ 2 ಸೇರಿದಂತೆ ವಿವಿಧ ಕಂಪೆನಿಯ ಒಟ್ಟು 10 ಲ್ಯಾಪ್ಟಾಪ್ಗಳು ಸೇರಿದಂತೆ 6.56ಲಕ್ಷ ರೂ.ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಬೆಂಗಳೂರಿನ ರೈಲ್ವೆ ಪೊಲೀಸರು ತಿಳಿಸಿದ್ದಾರೆ.