ಬೆಂಗಳೂರು: ಮಳೆಯ ರಭಸಕ್ಕೆ ಮರ ಬಿದ್ದು ಮೂರು ವರ್ಷದ ಮಗು ಮೃತ್ಯು

PC: x.com/XpressBengaluru
ಬೆಂಗಳೂರು: ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದ ಪರಿಣಾಮ ಮೂರು ವರ್ಷದ ಹೆಣ್ಣು ಮಗುವೊಂದು ಮೃತಪಟ್ಟಿರುವ ಘಟನೆ ಶನಿವಾರ ರಾತ್ರಿ (ಮಾ. 22) ಬೆಂಗಳೂರಿನ ಪುಲಕೇಶಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜೀವನಹಳ್ಳಿಯಲ್ಲಿ ನಡೆದಿದೆ.
ಕಮ್ಮನಹಳ್ಳಿ ಬಳಿಯ ಕುಳ್ಳಪ್ಪ ಸರ್ಕಲ್ ನಿವಾಸಿಗಳಾದ ಶಕ್ತಿ ಮತ್ತು ಸತ್ಯ ದಂಪತಿಯ 3ವರ್ಷದ ಮಗು ರಕ್ಷಾ ಪ್ರಾಣಕಳೆದುಕೊಂಡ ಬಾಲಕಿ.
ತನ್ನ ತಂದೆ ಸತ್ಯ ಅವರ ಜೊತೆಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಜೀವನಹಳ್ಳಿ ರಸ್ತೆಯಲ್ಲಿದ್ದ ಹೊಂಗೆ ಮರ ಬುಡಸಮೇತ ಬೈಕ್ ಮೇಲೆ ಬಿದ್ದಿದೆ. ಮರ ಬಿದ್ದ ರಭಸಕ್ಕೆ ರಕ್ಷಾಗೆ ತಲೆಗೆ ಗಂಭೀರ ಗಾಯಗಳಾಗಿ, ತೀವ್ರ ರಕ್ತ ಸ್ರಾವವಾಗಿದೆ. ಕೂಡಲೇ ರಕ್ಷಾಳನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಬಳಿಕ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೆ ಮಗು ಮೃತಪಟ್ಟಿದೆ.
Next Story