ಬೆಂಗಳೂರು ಜಲ ಸಂಕಷ್ಟ | ನನ್ನ ಮನೆಯ ಕೊಳವೆ ಬಾವಿ ಕೂಡಾ ಬತ್ತಿ ಹೋಗಿದೆ: ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು: ಯಾವುದೇ ಬೆಲೆ ತೆತ್ತಾದರೂ ಬೆಂಗಳೂರಿಗೆ ಸಾಕಷ್ಟು ನೀರು ಸರಬರಾಜಿನ ವ್ಯವಸ್ಥೆ ಮಾಡಲಾಗುವುದು ಎಂದು ರಾಜ್ಯ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದಾರೆ.
ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಪ್ರದೇಶಗಳು ನೀರಿನ ಬಿಕ್ಕಟ್ಟು ಎದುರಿಸುತ್ತಿದ್ದು, ನನ್ನ ಮನೆಯ ಕೊಳವೆ ಬಾವಿ ಕೂಡಾ ಬತ್ತಿ ಹೋಗಿದೆ ಎಂದು ತಿಳಿಸಿದ್ದಾರೆ.
"ನಾವು ತುಂಬಾ ಗಂಭೀರ ನೀರಿನ ಬಿಕ್ಕಟ್ಟನ್ನು ಎದುರಿಸುತ್ತಿದ್ದೇವೆ. ಆದರೆ, ಬೆಂಗಳೂರು ನಗರಕ್ಕೆ ಯಾವುದೇ ಬೆಲೆ ತೆತ್ತಾದರೂ ನೀರಿನ ಪೂರೈಕೆಯನ್ನು ಖಾತರಿಪಡಿಸಲಾಗುವುದು" ಎಂದು ಅವರು ಭರವಸೆ ನೀಡಿದ್ದಾರೆ.
ಮಳೆಯ ಕೊರತೆಯಿಂದ ಕೊಳವೆ ಬಾವಿಗಳು ಬತ್ತಿ ಹೋಗಿರುವುದರಿಂದ ಬೆಂಗಳೂರು ತೀವ್ರ ನೀರಿನ ಸಂಕಷ್ಟವನ್ನು ಎದುರಿಸುತ್ತಿದೆ. ಸಮುಚ್ಚಯದ ನಿವಾಸಿಗಳು ನೀರನ್ನು ಎಚ್ಚರಿಕೆಯಿಂದ ಬಳಕೆ ಮಾಡಬೇಕು ಎಂದು ವಸತಿ ಸಮುಚ್ಚಯದ ಸಂಘಟನೆಗಳು ಸಲಹೆ ನೀಡಿವೆ.
Next Story