ಬೆಂಗಳೂರು: ಮೆಟ್ರೋ ರೈಲಿನಲ್ಲಿ ಊಟ ಸೇವಿಸಿದ್ದಕ್ಕೆ ಮಹಿಳೆಗೆ 500 ರೂ.ದಂಡ

Photo credit: X
ಬೆಂಗಳೂರು: ಮೆಟ್ರೋ ರೈಲಿನೊಳಗೆ ಊಟ ಸೇವಿಸಿದ ಕಾರಣಕ್ಕೆ ನಿಯಮ ಉಲ್ಲಂಘನೆ ಅಡಿಯಲ್ಲಿ ಮಹಿಳಾ ಪ್ರಯಾಣಿಕರೊಬ್ಬರಿಗೆ 500 ರೂ. ದಂಡ ವಿಧಿಸಲಾಗಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ(ಬಿಎಂಆರ್ಸಿಎಲ್) ತಿಳಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಬಿಎಂಆರ್ಸಿಎಲ್, ಮಾದಾವರದಿಂದ ಮಾಗಡಿ ರಸ್ತೆ ಮಾರ್ಗದಲ್ಲಿ ಮೆಟ್ರೋ ರೈಲಿನಲ್ಲಿ ಪ್ರಯಾಣಿಸುವಾಗ ಮಹಿಳಾ ಪ್ರಯಾಣಿಕರೊಬ್ಬರಿಗೆ ಮೆಟ್ರೋ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ 500 ರೂಪಾಯಿ ದಂಡ ವಿಧಿಸಲಾಗಿದೆ. ಮೆಟ್ರೋದಲ್ಲಿ ಪ್ರಯಾಣಿಸುವಾಗ ಮಹಿಳೆಯು ರೈಲಿನೊಳಗೆ ಊಟ ಮಾಡಿದ್ದು, ಇದನ್ನು ಸಹ ಪ್ರಯಾಣಿಕರೊಬ್ಬರು ಮೊಬೈಲ್ನಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದನ್ನು ಗಮನಿಸಿ ಕ್ರಮ ಜರುಗಿಸಲಾಗಿದೆ ಎಂದು ತಿಳಿಸಿದೆ.
ಬೆಂಗಳೂರು ಮೆಟ್ರೋ ಆವರಣದೊಳಗೆ ಮತ್ತು ರೈಲುಗಳಲ್ಲಿ ಆಹಾರ ಸೇವಿಸುವುದನ್ನು ಮತ್ತು ಪಾನೀಯಗಳನ್ನು ಕುಡಿಯುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಈ ನಿಯಮಗಳನ್ನು ಉಲ್ಲಂಘಿಸಿದವರಿಗೆ ದಂಡ ವಿಧಿಸಲಾಗುವುದು ಎಂದು ಬಿಎಂಆರ್ಸಿಎಲ್ ಮಾಹಿತಿ ನೀಡಿದೆ.