ಬೆಂಗಳೂರು | ತಂದೆ ಬುದ್ದಿವಾದ ಹೇಳಿದ್ದಕ್ಕೆ ಯುವತಿ ಆತ್ಮಹತ್ಯೆ
ಬೆಂಗಳೂರು : ತಂದೆ ಬುದ್ದಿವಾದ ಹೇಳಿದ್ದಕ್ಕೆ ಮನನೊಂದ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಚಾಮರಾಜಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.
ಶ್ರಾವ್ಯಾ.ಡಿ(19) ಮೃತ ಯುವತಿ ಎಂದು ಗುರುತಿಸಲಾಗಿದೆ. ನಗರದ ಖಾಸಗಿ ಕಾಲೇಜಿನಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿದ್ದ ಶ್ರಾವ್ಯಾ ಮನೆಯಲ್ಲಿ ಕೌಟುಂಬಿಕ ಜಗಳದ ವಿಚಾರವಾಗಿ ನೊಂದಿದ್ದಳು ಎನ್ನಲಾಗಿದೆ.
ಅಲ್ಲದೆ, ಅ.18ರ ಶುಕ್ರವಾರ ರಾತ್ರಿ ಮಲಗುವಾಗ ಬೆಡ್ ಶೀಟ್ ವಿಚಾರಕ್ಕೆ ಶ್ರಾವ್ಯಾ ಹಾಗೂ ಆಕೆಯ ಸಹೋದರಿ ನಡುವೆ ಗಲಾಟೆಯಾಗಿತ್ತು. ಆ ಸಂದರ್ಭದಲ್ಲಿ ಶ್ರಾವ್ಯಾಗೆ ಅವರ ತಂದೆ ಬೈದು ಬುದ್ಧಿವಾದ ಹೇಳಿದ್ದರು. ಇದರಿಂದ ಮನನೊಂದು ಶ್ರಾವ್ಯಾ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ತಿಳಿದುಬಂದಿದೆ.
ಈ ಸಂಬಂಧ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story