Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ರೈತರಿಗೆ ನಿವೇಶನ ನೀಡಲು ಕ್ರಮ : ಭೈರತಿ...

ರೈತರಿಗೆ ನಿವೇಶನ ನೀಡಲು ಕ್ರಮ : ಭೈರತಿ ಸುರೇಶ್

ವಾರ್ತಾಭಾರತಿವಾರ್ತಾಭಾರತಿ18 March 2025 8:34 PM IST
share
ರೈತರಿಗೆ ನಿವೇಶನ ನೀಡಲು ಕ್ರಮ : ಭೈರತಿ ಸುರೇಶ್

ಬೆಂಗಳೂರು : ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ವಸತಿ ಬಡಾವಣೆ ರಚಿಸಲು ಉರಗಡೂರು ಗ್ರಾಮದಲ್ಲಿ ಒಟ್ಟು 60 ಎಕರೆ 30 ಗುಂಟೆ ಪ್ರದೇಶವನ್ನು 1985ರಲ್ಲಿ ಭೂ ಸ್ವಾಧೀನಪಡಿಸಿಕೊಳ್ಳಲಾಗಿದ್ದು, ಉರಗಡೂರು ಗ್ರಾಮದ ರೈತರಿಗೆ ಮಾನವೀಯತೆ ಆಧಾರದಡಿ ಪರಿಹಾರವಾಗಿ ಸಾಮಾನ್ಯ ದರದಲ್ಲಿ ನಿವೇಶನ ನೀಡಲು ಕ್ರಮ ವಹಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ತಿಳಿಸಿದ್ದಾರೆ.

ಮಂಗಳವಾರ ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯೆ ಬಿಲ್ಕಿಸ್ ಬಾನು ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಉರಗಡೂರು ಗ್ರಾಮದಲ್ಲಿ ವಶ ಪಡಿಸಿಕೊಳ್ಳಲಾದ ಜಮೀನಿಗೆ ಆಗಲೇ ಅಂದಿನ ದರದಂತೆ ಪರಿಹಾರವನ್ನು ನೀಡಲಾಗಿದೆ. ಈ ಭೂ ಮಾಲಕರಿಗೆ ವಸತಿ ಯೋಜನೆಗೆ ನೀಡಲಾದ ಭೂ ಪರಿಹಾರದ ಜೊತೆಗೆ ನಿವೇಶನಗಳನ್ನು ನೀಡಲು ಕರ್ನಾಟಕ ನಗರಾಭಿವೃದ್ಧಿಗಳ ಕಾಯ್ದೆ 1987ರನ್ವಯ ಅವಕಾಶ ಇಲ್ಲದ ಕಾರಣ ಪರಿಹಾರದ ರೂಪದಲ್ಲಿ ಪ್ರಾಧಿಕಾರದಿಂದ ಯಾವುದೇ ನಿವೇಶನಗಳನ್ನು ನೀಡಿರುವುದಿಲ್ಲ ಎಂದರು.

ಆದರೂ, ಸರಕಾರವು ಈ ಬಗ್ಗೆ ಪರಿಶೀಲಸಿ ಮಾನವೀಯತೆಯ ಆಧಾರದಡಿ ಪರಿಗಣಿಸಿ 2018ರಲ್ಲಿ ಈ ಜಮೀನುಗಳ ಭೂ ಮಾಲಕರಿಗೆ ಹೆಚ್ಚುವರಿ ಪರಿಹಾರವನ್ನಾಗಿ ಪ್ರತಿ ಎಕರೆಗೆ 40/60 ಅಡಿ ಅಳತೆಯ ಒಂದು ನಿವೇಶನವನ್ನು ಸಾಮಾನ್ಯ ಜನರಿಗೆ ಹಂಚಿಕೆ ಮಾಡುವ ದರದಲ್ಲಿ ಹಂಚಿಕೆ ಮಾಡಲು ಆದೇಶಿಸಲಾಗಿದೆ ಎಂದು ಭೈರತಿ ಸುರೇಶ್ ಹೇಳಿದರು.

ಉರಗಡೂರು ಗ್ರಾಮದ ಸರ್ವೆ ನಂ.340ರಿಂದ 357ರ ವರೆಗಿನ ಜಮೀನಿನ ಭೂ ಮಾಲಕರುಗಳಿಗೆ ತಲಾ ಒಂದು ಎಕರೆಗೆ 19,753 ರೂ., ಖುಷ್ಕಿ ಒಂದು ಎಕರೆಗೆ 12,325 ರೂ.ನಂತೆ ಪರಿಹಾರ ಮೊತ್ತವಾಗಿ ಒಟ್ಟು 20,69,159.00 ರೂ.ಗಳನ್ನು ನಿಗದಿಪಡಿಸಲಾಗಿದ್ದು, ಭೂ ಪರಿಹಾರ ಮೊತ್ತವನ್ನು ಭೂ ಮಾಲಕರು ಪಡೆಯದ ಕಾರಣ ನ್ಯಾಯಾಲಯಕ್ಕೆ ಜಮಾ ಮಾಡಲಾಗಿದೆ. ಈ ಪರಿಹಾರವನ್ನು 1995ನೇ ಸಾಲಿನ ಉಪನೋಂದಣಾಧಿಕಾರಿಗಳ ದರಕ್ಕೆ ಅನುಗುಣವಾಗಿ ನಿಗದಿಪಡಿಸಲಾಗಿದೆ. ಆದ್ದರಿಂದ ಕಾಮಗಾರಿ ಪ್ರಾರಂಭವಾದ ದಿನಾಂಕದಿಂದ ದರ ನಿಗದಿಪಡಿಸಲು ಅವಕಾಶ ಇರುವುದಿಲ್ಲ ಎಂದು ಭೈರತಿ ಸುರೇಶ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X