ಬೆಂಗಳೂರು | ಬೈಕ್ ವ್ಹೀಲಿಂಗ್ ಮಾಡುವಾಗ ಕ್ಯಾಂಟರ್ಗೆ ಢಿಕ್ಕಿ; ಇಬ್ಬರು ಮೃತ್ಯು
ಸಾಂದರ್ಭಿಕ ಚಿತ್ರ
ಬೆಂಗಳೂರು: ಬೈಕ್ ವ್ಹೀಲಿಂಗ್ ಮಾಡುವ ವೇಳೆ ಎದುರಗಡೆಯಿಂದ ಬರುತ್ತಿದ್ದ ಕ್ಯಾಂಟರ್ಗೆ ಢಿಕ್ಕಿ ಹೊಡೆದು ಯುವಕರಿಬ್ಬರು ಮೃತಪಟ್ಟ ಘಟನೆ ದೇವನಹಳ್ಳಿಯ ವಿಜಯಪುರ ಪಟ್ಟಣದ ಬೈಪಾಸ್ ರಸ್ತೆಯಲ್ಲಿ ನಡೆದಿದೆ.
ವಿಜಯಪುರ ಪಟ್ಟಣದ ಮನೋಜ್ (19) ಮತ್ತು ಅಬ್ರಝ್ (19) ಮೃತರು ಎಂದು ಪೊಲೀಸರು ಗುರುತಿಸಿದ್ದಾರೆ.
ಶನಿವಾರ ಬೆಳಗ್ಗೆ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ಬೈಪಾಸ್ ರಸ್ತೆಯಲ್ಲಿ ಮಳೆಯ ನಡುವೆ ಇಬ್ಬರು ದ್ವಿಚಕ್ರ ವಾಹನದಲ್ಲಿ ಬೈಕ್ ವ್ಹೀಲಿಂಗ್ ಮಾಡುತ್ತಿದ್ದರು ಎನ್ನಲಾಗಿದೆ. ಈ ವೇಳೆ ಎದುರುಗಡೆ ಬರುತ್ತಿದ್ದ ಕ್ಯಾಂಟರ್ಗೆ ಢಿಕ್ಕಿ ಹೊಡೆದು ತೀವ್ರ ರಕ್ತಸ್ರಾವವಾಗಿ ಇಬ್ಬರೂ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
Next Story