Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ರಾಜ್ಯ ಸರಕಾರ ವಿರುದ್ಧ ಬಿಜೆಪಿಯಿಂದ 2...

ರಾಜ್ಯ ಸರಕಾರ ವಿರುದ್ಧ ಬಿಜೆಪಿಯಿಂದ 2 ಹಂತದ ಹೋರಾಟ : ಬಿ.ವೈ.ವಿಜಯೇಂದ್ರ

ವಾರ್ತಾಭಾರತಿವಾರ್ತಾಭಾರತಿ1 April 2025 3:20 PM IST
share
ರಾಜ್ಯ ಸರಕಾರ ವಿರುದ್ಧ ಬಿಜೆಪಿಯಿಂದ 2 ಹಂತದ ಹೋರಾಟ : ಬಿ.ವೈ.ವಿಜಯೇಂದ್ರ

ಬೆಂಗಳೂರು : ಬಿಜೆಪಿ ಎರಡು ಪ್ರಮುಖ ಹೋರಾಟಗಳನ್ನು ಕೈಗೆತ್ತಿಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪಕ್ಷದ ಎಲ್ಲ ಹಿರಿಯರು ಚರ್ಚೆ ಮಾಡಿ ಹೋರಾಟದ ನಿರ್ಧಾರ ಮಾಡಿದ್ದೇವೆ. ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದ ಬಳಿಕ ಕಳೆದ 20 ತಿಂಗಳಿನಲ್ಲಿ ಜನರಿಗೆ ಬೆಲೆ ಏರಿಕೆಯ ಗ್ಯಾರಂಟಿಯನ್ನು ದಯಪಾಲಿಸಿದ್ದಾರೆ. ಸರಕಾರದ ನಿರ್ಧಾರದಿಂದ ಜನಸಾಮಾನ್ಯರಿಗೆ ಸಾಕಷ್ಟು ತೊಂದರೆ ಉಂಟಾಗಿದೆ ಎಂದು ಟೀಕಿಸಿದರು.

ಕಾಂಗ್ರೆಸ್ ಸರಕಾರ ಹಾಲಿನ ದರ, ವಿದ್ಯುತ್ ದರ, ನೀರಿನ ದರ, ಪೆಟ್ರೋಲ್, ಡೀಸೆಲ್, ಸ್ಟಾಂಪ್ ಶುಲ್ಕ, ಮೆಟ್ರೊ ದರ ಏರಿಸುವ ಮೂಲಕ ಜನಸಾಮಾನ್ಯರಿಗೆ ಬದುಕು ಹೊರೆ ಎನಿಸುವಂತೆ ಮಾಡಿದೆ. ಬೆಲೆ ಏರಿಕೆ ನಿರಂತರವಾಗಿ ಸಾಗುತ್ತಿದೆ ಎಂದು ಆಕ್ಷೇಪಿಸಿದರು.

ಬೆಲೆ ಏರಿಕೆ ಸೇರಿ ರಾಜ್ಯ ಸರಕಾರದ ನೀತಿಗಳನ್ನು ಖಂಡಿಸಿ ಏ.2ರಂದು ಬೆಳಿಗ್ಗೆ 11 ಗಂಟೆಗೆ ಫ್ರೀಡಂ ಪಾರ್ಕ್‌ನಲ್ಲಿ ಅಹೋರಾತ್ರಿ ಧರಣಿ ನಡೆಸುತ್ತೇವೆ. ಬಿಜೆಪಿಯ ಎಲ್ಲ ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಶಾಸಕರು, ವಿಧಾನಪರಿಷತ್ ಮಾಜಿ ಸದಸ್ಯರು, ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳು, ರಾಜ್ಯದ ಎಲ್ಲ ಪದಾಧಿಕಾರಿಗಳು, ಜಿಲ್ಲಾ ಅಧ್ಯಕ್ಷರು, ಕಾರ್ಯಕರ್ತರು ಭಾಗವಹಿಸುತ್ತಾರೆ. ದೊಡ್ಡ ಮಟ್ಟದಲ್ಲಿ ಈ ಹೋರಾಟ ನಡೆಯಲಿದೆ ಎಂದು ತಿಳಿಸಿದರು.

ಹಣಕಾಸು ಸಚಿವರಾದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈಚೆಗೆ ಸರಕಾರಿ ಕಾಮಗಾರಿಗಳಲ್ಲಿ ಮುಸಲ್ಮಾನರಿಗೆ ಶೇ.4ರಷ್ಟು ಮೀಸಲಾತಿ ನೀಡಿದ್ದಾರೆ. ಇದು ಕಾಂಗ್ರೆಸ್ ಮತ್ತು ಮುಖ್ಯಮಂತ್ರಿಗಳ ಸಂವಿಧಾನ ವಿರೋಧಿ ನಡೆ ಮಾತ್ರವಲ್ಲ, ಹಿಂದೂಗಳಿಗೆ ಅಪಮಾನ ಮಾಡುವ ಕ್ರಮ ಎಂದು ಆಕ್ಷೇಪಿಸಿದರು. ಮತ್ತೊಂದು ಕಡೆ ಪರಿಶಿಷ್ಟ ಜಾತಿ- ಪಂಗಡಗಳ ಸಾಮಾಜಿಕ, ಶೈಕ್ಷಣಿಕ ಅಭಿವೃದ್ಧಿಗೆ ಮೀಸಲಿಟ್ಟ ಸುಮಾರು 38 ಸಾವಿರ ಕೋಟಿ ರೂ. ಹಣವನ್ನು ಬೇರೆ ಬೇರೆ ಗ್ಯಾರಂಟಿಗಳಿಗೆ ವರ್ಗಾವಣೆ ಮಾಡುವ ಮೂಲಕ ರಾಜ್ಯ ಸರಕಾರ ಮತ್ತು ಸಿದ್ದರಾಮಯ್ಯನವರು ಆ ಶೋಷಿತ, ಪೀಡಿತ ಸಮುದಾಯಗಳಿಗೆ ಅನ್ಯಾಯ ಮಾಡಿದ್ದಾರೆ. ಸಿದ್ದರಾಮಯ್ಯನವರ ಸರಕಾರವು ಜನರು ಸೇವಿಸುವ ಗಾಳಿಯೊಂದನ್ನು ಬಿಟ್ಟು ಮತ್ತೆಲ್ಲದಕ್ಕೂ ತೆರಿಗೆ ಹಾಕುತ್ತಿದೆ ಎಂದು ಪುನರುಚ್ಚರಿಸಿದರು.

ಹಿಂದೂಗಳಿಗೆ ಅವಮಾನ, ಎಸ್‍ಇಪಿ, ಟಿಎಸ್‍ಪಿ ಹಣ ದುರ್ಬಳಕೆ ವಿಚಾರವನ್ನು ಮುಂದಿಟ್ಟು ಮೈಸೂರಿನಿಂದ ಏ.7ರಿಂದ ಎಲ್ಲ ಜಿಲ್ಲೆಗಳ ಪ್ರವಾಸ ‘ಜನಾಕ್ರೋಶ ಯಾತ್ರೆ’ ಮಾಡುತ್ತೇವೆ. ಪ್ರತಿ ಜಿಲ್ಲೆಗೂ ಯಾತ್ರೆ ತೆರಳಲಿದೆ. ಏ.7ರಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ತಾಯಿಯ ದರ್ಶನ ಪಡೆದು ಪಾದಯಾತ್ರೆ ಮೂಲಕ ಹೋರಾಟ ಆರಂಭಿಸುತ್ತೇವೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಹೋರಾಟಕ್ಕೆ ಚಾಲನೆ ನೀಡಲಿದ್ದಾರೆ ಎಂದರು.

ಯತ್ನಾಳ್ ಅವರು ಈಗ ಬಹಳ ಫ್ರೀಯಾಗಿದ್ದಾರೆ. ಅವರು ಆರೋಪ ಮಾಡಲಿ. ದಾಳಿ ಮಾಡಲಿ, ಅದರ ಬಗ್ಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು. ರಾಜ್ಯ ಸರಕಾರದ ಜನವಿರೋಧಿ ನೀತಿಗಳ ವಿರುದ್ಧ ನಾನು ಎಲ್ಲರ ಜೊತೆಗೂಡಿ ಹೋರಾಟ, ಜನಜಾಗೃತಿ ಮಾಡಲಿದ್ದೇನೆ. ಇವರ ಗ್ಯಾರಂಟಿ ಎಂದರೆ ಒಂದು ಕೈಯಿಂದ ಕೊಡುವುದು ಮತ್ತು ಇನ್ನೊಂದು ಕೈಯಿಂದ ಕಿತ್ತುಕೊಳ್ಳುವುದು. ಇದರಿಂದ ಜನರು ಇವತ್ತು ತತ್ತರಿಸಿ ಹೋಗಿದ್ದಾರೆ. ಇದೆಲ್ಲದರ ವಿರುದ್ಧ ಜನಜಾಗೃತಿಯನ್ನು ಬಿಜೆಪಿ ಮಾಡಲಿದೆ ಎಂದು ತಿಳಿಸಿದರು.

ಭಕ್ತರ ಪಾಲಿಗೆ ನಡೆದಾಡುವ ದೇವರು ಎನಿಸಿಕೊಂಡಿದ್ದ ಪರಮಪೂಜ್ಯ ಡಾ.ಶಿವಕುಮಾರ ಮಹಾಸ್ವಾಮೀಜಿಗಳ ಜಯಂತ್ಯುತ್ಸವವನ್ನು ಇವತ್ತು ನಾಡಿನಾದ್ಯಂತ, ದೇಶಾದ್ಯಂತ ಅರ್ಥಪೂರ್ಣವಾಗಿ ಜನರು ಆಚರಿಸುತ್ತಿದ್ದಾರೆ ಎಂದು ನುಡಿದರು. ಶಿವಕುಮಾರ ಮಹಾಸ್ವಾಮೀಜಿಗಳು ತೋರಿಸಿಕೊಟ್ಟ ಸನ್ಮಾರ್ಗದಲ್ಲಿ ನಾವೆಲ್ಲರೂ ನಡೆಯುವ ಮೂಲಕ ಅವರ ಜಯಂತ್ಯುತ್ಸವವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡುತ್ತಿದ್ದೇವೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X