ನಿವೃತ್ತ ಪೊಲೀಸ್ ಮಹಾನಿರ್ದೇಶಕ ಬಿ.ಎನ್.ಗರುಡಾಚಾರ್ ನಿಧನ
ಬಿ.ಎನ್.ಗರುಡಾಚಾರ್(96)
ಬೆಂಗಳೂರು: ಬೆಂಗಳೂರಿನ ಚಿಕ್ಕಪೇಟೆ ಕ್ಷೇತ್ರದ ಶಾಸಕ ಉದಯ್ ಗರುಡಾಚಾರ್ ತಂದೆ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಬಿ.ಎನ್.ಗರುಡಾಚಾರ್ ಶುಕ್ರವಾರ ನಿಧನರಾಗಿದ್ದಾರೆ.
ಮೃತರಿಗೆ ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರು ಇದ್ದಾರೆ.
ವಿವಿಧ ಜಿಲ್ಲೆಗಳಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ, ಬೆಂಗಳೂರು ಜಿಲ್ಲೆಯ ಎಸ್.ಪಿ ಹಾಗೂ ಬೆಂಗಳೂರು ನಗರದ ಡಿಸಿಪಿಯಾಗಿ ಮತ್ತು ಪೊಲೀಸ್ ಕಮಿಷನರ್, ಪೊಲೀಸ್ ಡಿಜಿ/ಐಜಿಪಿಯಾಗಿ ಕೆಲಸ ಮಾಡಿದ್ದರು.
ಬಿ.ಎನ್.ಗರುಡಾಚಾರ್ ಅವರು ಬೆಂಗಳೂರು ಕಮಿಷನರ್ ಸೇರಿ ಹಲವು ಹುದ್ದೆಗಳನ್ನು ನಿರ್ವಹಿಸಿದ್ದರು. ರಾಜ್ಯ ರಾಜಧಾನಿಯಲ್ಲಿ ಮೊದಲ ಟ್ರಾಫಿಕ್ ಸಿಗ್ನಲ್ ಸ್ಥಾಪನೆ ಮಾಡಿದಾಗ ಗರುಡಾಚಾರ್ ಅವರು ಟ್ರಾಫಿಕ್ ಡಿಸಿಪಿ ಆಗಿದ್ದರು.
ಬಸವನಗುಡಿಯ ಕೃಷ್ಣ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
Next Story