ಬೆಂಗಳೂರು ವಿಮಾನ ನಿಲ್ದಾಣಕ್ಕೆ ಸತತ 10 ಬಾರಿ ಬಾಂಬ್ ಬೆದರಿಕೆ
ಕೆಂಪೇಗೌಡ ವಿಮಾನ ನಿಲ್ದಾಣ
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಸಹ ಸತತ 10 ಬಾರಿ ಬಾಂಬ್ ಬೆದರಿಕೆ ಕರೆಗಳು ಬಂದಿರುವ ಪ್ರಕರಣ ಬೆಳಕಿಗೆ ಬಂದಿದೆ.
ಸತತ 10 ಬಾರಿ ಬಾಂಬ್ ಸ್ಫೋಟ ಮಾಡುವುದಾಗಿ ಸಂದೇಶಗಳನ್ನು ದುಷ್ಕರ್ಮಿಗಳು ಕಳುಹಿಸಿದ್ದು, ಈ ಸಂಬಂಧ ಆರೋಪಿಗಳ ವಿರುದ್ಧ ಕೆಂಪೇಗೌಡ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ 10 ಪ್ರಕರಣಗಳು ದಾಖಲಾಗಿವೆ ಎಂದು ತಿಳಿದು ಬಂದಿದೆ.
ದುಷ್ಕರ್ಮಿಗಳು ಅ.22 ರಿಂದ ಸತತ ನಾಲ್ಕು ದಿನಗಳ ಕಾಲ ಬಾಂಬ್ ಬೆದರಿಕೆ ಸಂದೇಶ ಕಳಿಸಿದ್ದರು.ವೆಬ್ಸೈಟ್ ಮತ್ತು ಎಕ್ಸ್ ಖಾತೆ ಮುಖಾಂತರ ವಿಮಾನ ನಿಲ್ದಾಣ ಮತ್ತು ಇಂಡಿಗೊ ಏರ್ಲೈನ್ಸ್ ಸೇರಿದಂತೆ ಹಲವು ಏರ್ಲೈನ್ಸ್ ಗಳಿಗೆ ಬೆದರಿಕೆ ಸಂದೇಶ ಕಳುಹಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ
Next Story