ಪೋಕ್ಸೋ ಪ್ರಕರಣ | ಎಫ್‌ಐಆರ್ ರದ್ದು ಕೋರಿ ಬಿಎಸ್‌ವೈ ಹೈಕೋರ್ಟ್ ಮೊರೆ

ಬೆಂಗಳೂರು: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದು ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ತಮ್ಮ ವಿರುದ್ಧ ದಾಖಲಾಗಿರುವ ದೂರು, ಎಫ್‌ಐಆರ್, ಸಿಐಡಿ ಪೊಲೀಸರು ಸಲ್ಲಿಸಿರುವ ಚಾರ್ಚ್ ಶೀಟ್ ಹಾಗೂ ಪೊಕ್ಸೋ ವಿಶೇಷ ನ್ಯಾಯಾಲಯವು ಸಂಜ್ಞೆ ಪರಿಗಣಿಸಿ ಜಾರಿಗೊಳಿಸಿರುವ ಸಮನ್ಸ್ ರದ್ದು ಕೋರಿ ಬಿ.ಎಸ್.ಯಡಿಯೂರಪ್ಪ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ಪ್ರಕರಣದ ತನಿಖೆ ನಡೆಸಿರುವ ಸಿಐಡಿಯ ಎಸ್‌ಐಟಿಯನ್ನು ಪ್ರತಿವಾದಿ ಮಾಡಿದ್ದಾರೆ. ಅರ್ಜಿ ವಿಚಾರಣೆಗೆ ಬರಬೇಕಿದೆ.
Next Story