ಬಿ.ಟಿ. ಲಲಿತಾ ನಾಯಕ್ ಗೆ ʻಶ್ರೀ ಸಂತ ಸೇವಾಲಾಲ್ ಪ್ರಶಸ್ತಿʼ ಪ್ರದಾನ
ಬೆಂಗಳೂರು: ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ವತಿಯಿಂದ ಸ್ಥಾಪಿಸಿದ ಪ್ರಥಮ ವರ್ಷದ ʻಶ್ರೀ ಸಂತ ಸೇವಾಲಾಲ್ ಪ್ರಶಸ್ತಿʼಯನ್ನು ಬಂಜಾರ ಸಮುದಾಯದ ಹಿರಿಯ ಸಾಹಿತಿ, ಹೋರಾಟಗಾರ್ತಿ ಹಾಗೂ ಮಾಜಿ ಸಚಿವೆ ಡಾ.ಬಿ.ಟಿ.ಲಲಿತಾನಾಯಕ್ ಅವರಿಗೆ ನಾಡೋಜ ಪ್ರೊ.ಬರಗೂರು ರಾಮಚಂದ್ರಪ್ಪ ಹಾಗೂ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಅಧ್ಯಕ್ಷ ಡಾ.ಎ.ಆರ್.ಗೋವಿಂದಸ್ವಾಮಿ ಪ್ರದಾನ ಮಾಡಿದರು.
ಈ ಸಂದರ್ಭದಲ್ಲಿ ಎಂ.ಎಲ್.ಸಿ ಪುಟ್ಟಣ್ಣ, ಕನ್ನಡ ಪುಸ್ತಕ ಪ್ರಾಧಿಕಾರ ಅಧ್ಯಕ್ಷ ಡಾ.ಮಾನಸ, ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಪ್ರೊ.ಕೆ.ಎಲ್.ಮುಕುಂದ್ ರಾಜ್, ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಅಧ್ಯಕ್ಷ ಡಾ.ಚನ್ನಪ್ಪ ಕಟ್ಟೆ, ಬಂಜಾರ ಅಕಾಡೆಮಿ ರಿಜಿಸ್ಟ್ರಾರ್ ಡಿ.ಎಂ.ರವಿಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು ಎಂದು ಪ್ರಕಟನೆ ತಿಳಿಸಿದೆ.
Next Story