ಜಾತಿ ನಿಂದನೆ ಆರೋಪ ಪ್ರಕರಣ: ವಕೀಲ ಕೆ.ಎನ್. ಜಗದೀಶ್ ಬಂಧನ
ಬೆಂಗಳೂರು: ಜಾತಿ ನಿಂದನೆ ಆರೋಪದ ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪದಲ್ಲಿ ವಕೀಲ ಕೆ.ಎನ್. ಜಗದೀಶ್ ಅವರನ್ನು ಕೊಡಿಗೇಹಳ್ಳಿ ಠಾಣೆ ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಜಗದೀಶ್ ವಿರುದ್ಧ 2022ರಲ್ಲಿ ಜಾತಿ ನಿಂದನೆ ಆರೋಪದಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ಜಗದೀಶ್ ತಲೆಮರೆಸಿಕೊಂಡಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿತ್ತು.
ಈ ನಡುವೆ ಜಗದೀಶ್ ಗೋವಾದಲ್ಲಿರುವ ಮಾಹಿತಿ ಪಡೆದ ಕೊಡಿಗೇಹಳ್ಳಿ ಠಾಣೆಯ ಪೊಲೀಸರು ಅಲ್ಲಿಗೆ ತೆರಳಿ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
Next Story